BJP-JDS ಪಾದಯಾತ್ರೆಗೆ ಟಕ್ಕರ್, ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ
ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ಇಂದು (ಶುಕ್ರವಾರ) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶ ನಡೆಸುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಚಿವರು ಶಾಸಕರು ಭಾಗಿಯಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಪದಾಯಾತ್ರೆ ನಡೆಯುವ ಊರುಗಳಲ್ಲಿ ಜನಾಂದಲೋನ ಸಮಾವೇಶ ನಡೆಸುತ್ತ ಬಂದಿದೆ. ಮೈತ್ರಿ ನಾಯಕರ ಪಾದಯಾತ್ರೆ ಶನಿವಾರ ಮೈಸೂರು ತಲುಪಲಿದೆ. ಇದಕ್ಕೂ ಮುನ್ನ ಇಂದು (ಶುಕ್ರವಾರ) ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶ ನಡೆಸುತ್ತಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸಚಿವರು ಶಾಸಕರು ಭಾಗಿಯಾಗಿದ್ದಾರೆ. ಸಮಾವೇಶದಲ್ಲಿ ಸುಮಾರು 1 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ. ಕಾರ್ಯಕ್ರಮದ ವೀಕ್ಷಣೆಗೆ ಬೃಹತ್ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Aug 09, 2024 11:25 AM
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
