ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾರ ಸರಿಸಮಕ್ಕೆ ನಿಲ್ಲುವ ನಾಯಕ ಕಾಂಗ್ರೆಸ್ ನಲ್ಲಿ ಒಬ್ಬನಾದರೂ ಇದ್ದಾನೆಯೇ? ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Jan 21, 2023 | 5:41 PM

ಕಾಂಗ್ರೆಸ್​ನಲ್ಲಿ ಅಲ್ಲೊಬ್ಬ ಇಲ್ಲೊಬ್ಬ ಯಂಕ ನಾಣಿ ಸೀನರಂಥ ನಾಯಕರೇ ಇರೋದು ಎಂದು ಯಡಿಯೂರಪ್ಪ ಹೇಳಿದರು.

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು (BS Yediyurappa) ಕಾಂಗ್ರೆಸ್ ಪಕ್ಷ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಲೇವಡಿ ಮಾಡಿದರು. ಪಕ್ಷದ ಆಧ್ಯಕ್ಷ ಜೆಪಿ ನಡ್ಡಾ (JP Nadda) ಅವರೊಂದಿಗೆ ಇಂದು ನಗರದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನದ ಬಳಿಕ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತಾಡಿದ ಯಡಿಯೂರಪ್ಪನವರು ಮಹಿಳಾ ಸಬಲೀಕರಣ ಸಾಧ್ಯವಾಗುವುದಾದರೆ ಅದು ಕೇವಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದಿಂದ ಮಾತ್ರ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಅಮಿತ್ ಶಾ ಅವರ ಸರಿಸಮಕ್ಕೆ ನಿಲ್ಲುವ ನಾಯಕ ಕಾಂಗ್ರೆಸ್ ನಲ್ಲಿ ಒಬ್ಬನಾದರೂ ಇದ್ದಾನೆಯೇ, ಅಲ್ಲೊಬ್ಬ ಇಲ್ಲೊಬ್ಬ ಯಂಕ ನಾಣಿ ಸೀನರಂಥ ನಾಯಕರೇ ಆ ಪಕ್ಷದಲ್ಲಿರೋದು ಎಂದು ಯಡಿಯೂರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.