ಮತದಾರರ ಪಟ್ಟಿ ನವೀಕರಣ ಅನುಮತಿ ದುರ್ಬಳಕೆ, ಕಾಂಗ್ರೆಸ್ ಪಕ್ಷದಿಂದ ಪೊಲೀಸ್ಗೆ ದೂರು
ವೋಟರ್ ಐಡಿಗಳಲ್ಲಿ ತಿದ್ದುಪಡಿ ಮಾಡುವುದು ಅಕ್ಷಮ್ಯ ಅಪರಾಧ, ಹಾಗಾಗಿ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಪೊಲೀಸ್ ದೂರು ದಾಖಲಿಸುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಮತ್ತು ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ನೇರ ಹೊಣೆಗಾರರು ಎಂದು ಆರೋಪಿಸಿರುವ ಕಾಂಗ್ರೆಸ್, ಅವರನ್ನು ಬಂಧಿಸಬೇಕು ಎಂದು ಹೇಳಿದೆ. ವೋಟರ್ ಐಡಿಗಳಲ್ಲಿ ತಿದ್ದುಪಡಿ ಮಾಡುವುದು ಅಕ್ಷಮ್ಯ ಅಪರಾಧ, ಹಾಗಾಗಿ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಪೊಲೀಸ್ ದೂರು ದಾಖಲಿಸುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ, ಸಿದ್ದರಾಮಯ್ಯ, ಜಿ ಪರಮೇಶ್ವರ, ಎಮ್ ಬಿ ಪಾಟೀಲ ಮೊದಲಾದವರು ಸೇರಿದಂತೆ ಹಲವಾರು ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಇಂದು ಪತ್ರಿಕಾ ಗೋಷ್ಟಿಯನ್ನು ನಡೆಸಿದರು.
Latest Videos