BJP ಸೇಡಿನ ರಾಜಕಾರಣ ಮಾಡುತ್ತಿದೆ; ಬಾಯಿಗೆ ಕಪ್ಪು ಪಟ್ಟಿ ಕಟ್ಟಿ ಕಾಂಗ್ರೆಸ್ ಪ್ರತಿಭಟನೆ
ತಿಭಟನೆಯಲ್ಲಿ ಭಾಗಿಯಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಭಟನಾ ಸ್ಥಳದಲ್ಲೇ ಕಡತಗಳಿಗೆ ಸಹಿ ಹಾಕಿದ್ದಾರೆ. ಫ್ರೀಡಂಪಾರ್ಕ್ಗೆ ಅಧಿಕಾರಿಗಳು ತಂದಿದ್ದ ತಮ್ಮ ಇಲಾಖೆಗೆ ಸಂಬಂಧಿಸಿದ ಕಡತಗಳಿಗೆ ಡಿ.ಕೆ.ಶಿವಕುಮಾರ್ ಸಹಿ ಹಾಕಿದರು.
ಬೆಂಗಳೂರು: ರಾಹುಲ್ ಗಾಂಧಿ(Rahul Gandhi) ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ(Freedom Park) ರಾಜ್ಯ ಕಾಂಗ್ರೆಸ್ ನಾಯಕರು(Congress) ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. BJP ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ(Protest) ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಡಾ.ಪರಮೇಶ್ವರ್, ಶರಣಬಸಪ್ಪ ದರ್ಶನಾಪುರ, ಸಂತೋಷ್ ಲಾಡ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಕಾಂಗ್ರೆಸ್ ಶಾಸಕರು, ಮುಖಂಡರು ಭಾಗಿಯಾಗಿದ್ದಾರೆ.
ಇನ್ನು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಭಟನಾ ಸ್ಥಳದಲ್ಲೇ ಕಡತಗಳಿಗೆ ಸಹಿ ಹಾಕಿದ್ದಾರೆ. ಫ್ರೀಡಂಪಾರ್ಕ್ಗೆ ಅಧಿಕಾರಿಗಳು ತಂದಿದ್ದ ತಮ್ಮ ಇಲಾಖೆಗೆ ಸಂಬಂಧಿಸಿದ ಕಡತಗಳಿಗೆ ಡಿ.ಕೆ.ಶಿವಕುಮಾರ್ ಸಹಿ ಹಾಕಿದರು. ಇನ್ನು ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿ ಪ್ರತಿಭಟನೆ ಮಾಡಿದ್ರೆ ಡಿಕೆ ಶಿವಕುಮಾರ್ ಮೂಗಿಗೆ ಕಪ್ಪು ಪಟ್ಟಿ ಕಟ್ಟಿಕೊಂಡಿದ್ದರು.