ಬೆಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ: ನೂರಾರು ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು

ಬೆಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ: ನೂರಾರು ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 16, 2022 | 3:16 PM

ಪ್ರತಿಭಟನೆಯಲ್ಲಿ ಸಾವಿರಾರು ಮಹಿಳಾ ಕಾರ್ಯಕರ್ತರು ಕೂಡ ಇದ್ದಾರೆ. ಅವರನ್ನು ಮಹಿಳಾ ಪೊಲೀಸರು ವಶಕ್ಕೆ ತೆಗೆದುಕೊಂಡು ಬಸ್ಸುಗಳಲ್ಲಿ ತುಂಬಿಸುತ್ತಿದ್ದಾರೆ. ಕೆಲ ಮಹಿಳೆಯರು ಬಸ್ ಹತ್ತಲು ನಿರಾಕರಿಸಿದಾಗ ಬಲವಂತದಿಂದ ಅವರನ್ನು ಎಳೆದೊಯ್ಯಲಾಗುತ್ತಿದೆ.

ಬೆಂಗಳೂರಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು (Congress workers) ಹಟಕ್ಕ ಬಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂಡಿಯನ್ ಎಕ್ಸ್ಪ್ರೆಸ್ (Indian Express) ವೃತ್ತದ ಬಳಿ ಅವರನ್ನು ತಡೆಯುವ ಪೊಲೀಸರ ಪ್ರಯತ್ನಗಳು ವಿಫಲವಾಗುತ್ತಿವೆ. ಪ್ರತಿಭಟನೆಯಲ್ಲಿ ಸಾವಿರಾರು ಮಹಿಳಾ ಕಾರ್ಯಕರ್ತರು (women workers) ಕೂಡ ಇದ್ದಾರೆ. ಅವರನ್ನು ಮಹಿಳಾ ಪೊಲೀಸರು ವಶಕ್ಕೆ ತೆಗೆದುಕೊಂಡು ಬಸ್ಸುಗಳಲ್ಲಿ ತುಂಬಿಸುತ್ತಿದ್ದಾರೆ. ಕೆಲ ಮಹಿಳೆಯರು ಬಸ್ ಹತ್ತಲು ನಿರಾಕರಿಸಿದಾಗ ಬಲವಂತದಿಂದ ಅವರನ್ನು ಎಳೆದೊಯ್ಯಲಾಗುತ್ತಿದೆ. ಏತನ್ಮಧ್ಯೆ, ಪುರುಷ ಯುವ ಕಾರ್ಯಕರ್ತರು ನೆಲದಲ್ಲಿ ಕೂತು ಪ್ರತಿಭಟನೆ ಆರಂಭಿಸುತ್ತಾರೆ. ಅವರನ್ನು ಸಹ ಪೊಲೀಸರು ವಶಕ್ಕೆ ಪಡೆಯುವ ಪ್ರಯತ್ನ ಮಾಡುತ್ತಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.