Bengaluru: ಕಾಂಗ್ರೆಸ್ ನಿಂದ ಪೋಸ್ಟರ್ ಅಭಿಯಾನ ಪುನರಾರಂಭ, ಬಿಜೆಪಿಯೇ ಭರವಸೆ ಪೋಸ್ಟರ್​ಗಳ ಮೇಲೆ ಸಾಕಪ್ಪಾ ಸಾಕು ಕಿವಿ ಮೇಲೆ ಹೂವ ಪೋಸ್ಟರ್​ಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Feb 18, 2023 | 12:45 PM

ಬಿಜೆಪಿಯೇ ಭರವಸೆ ಪೋಸ್ಟರ್ ಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ರಾತ್ರೋರಾತ್ರಿ ಸಾಕಪ್ಪಾ ಸಾಕು ಕಿವಿ ಮೇಲೆ ಹೂವ ಎಂದು ಮುದ್ರಿಸಿರುವ ಪೋಸ್ಟರ್ ಗಳನ್ನು ಮೆತ್ತಿದ್ದಾರೆ.

ಬೆಂಗಳೂರು: ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಕಾಂಗ್ರೆಸ್ ಪಕ್ಷದ ಪೋಸ್ಟರ್ ಅಭಿಯಾನ (Poster Campaign)ಮತ್ತೇ ಶುರುವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನಿನ್ನೆ ವಿಧಾನ ಸಭೆಯಲ್ಲಿ ಬಜೆಟ್ ಮಂಡಿಸುವಾಗ ನಡೆದ ಕಿವಿ ಮೇಲೆ ಹೂ ಸನ್ನಿವೇಶ ಕಾಂಗ್ರೆಸ್ ಕಾರ್ಯಕರ್ತರಿಗೆ (Congress Workers) ಪ್ರೇರಣೆ ಒದಗಿಸಿರಬಹುದು. ಬೆಂಗಳೂರು ನಗರದೆಲ್ಲೆಡೆ ಅಂಟಿಸಲಾಗಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರಗಳನ್ನು ಒಳಗೊಂಡ ಬಿಜೆಪಿಯೇ ಭರವಸೆ ಪೋಸ್ಟರ್ ಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ರಾತ್ರೋರಾತ್ರಿ ಸಾಕಪ್ಪಾ ಸಾಕು ಕಿವಿ ಮೇಲೆ ಹೂವ ಎಂದು ಮುದ್ರಿಸಿರುವ ಪೋಸ್ಟರ್ ಗಳನ್ನು ಮೆತ್ತಿದ್ದಾರೆ. ಪೋಸ್ಟರ್ ಯುದ್ಧ ಇನ್ನು ಪೂರ್ಣಪ್ರಮಾಣದಲ್ಲಿ ನಡೆಯೋದು ಮಾತ್ರ ಸತ್ಯ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 18, 2023 12:45 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.