ಪ್ರತಿಯೊಬ್ಬ ಕಾರ್ಯಕರ್ತನ ಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನನ್ನೊಬ್ಬನಿಂದ ಅಲ್ಲ: ಡಿಕೆ ಶಿವಕುಮಾರ್, ಕೆಪಿಸಿಸಿ ಅದ್ಯಕ್ಷ

ಪ್ರತಿಯೊಬ್ಬ ಕಾರ್ಯಕರ್ತನ ಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನನ್ನೊಬ್ಬನಿಂದ ಅಲ್ಲ: ಡಿಕೆ ಶಿವಕುಮಾರ್, ಕೆಪಿಸಿಸಿ ಅದ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 21, 2023 | 4:13 PM

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತಂದ ಶ್ರೇಯಸ್ಸು ಕೇವಲ ಶಿವಕುಮಾರ್ ಸಲ್ಲಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ಹೇಳಿರುವುದನ್ನು ಅವರ ಗಮನಕ್ಕೆ ತಂದಾಗ, ಗೆಲುವಿನ ಕ್ರೆಡಿಟ್ ತನಗೆ ಸಲ್ಲಬೇಕು ತಾನ್ಯಾವತ್ತೂ ಹೇಳಿಲ್ಲ, ಕಾಂಗ್ರೆಸ್ ಪಕ್ಷದ ಭಾರೀ ಯಶಸ್ಸಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಕಾರಣ, ಗ್ರಾಮೀಣ ಭಾಗಗಳ ಕಾರ್ಯರ್ತರು ಸಹ ಬೆವರು ಸುರಿಸಿದ್ದಾರೆ ಎಂದು ಹೇಳಿದರು.

ಬೆಂಗಳೂರು: ಎರಡೂವರೆ ವರ್ಷಗಳ ಬಳಿಕ ಸಿದ್ದರಾಮಯ್ಯ ಸರ್ಕಾರದ (Siddaramaiah government) ಸಂಪುಟ ಪುನಾರಚನೆಯಾಗುತ್ತಾ? ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ವಿಷಯ ರಾಜಕೀಯ ಮತ್ತು ಸಾರ್ವಜನಿಕ ವಲಯಗಳಲ್ಲಿ ಚರ್ಚೆಯಾಗುತ್ತಿದೆ. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ (Ashok Pattan) ಸಹ ನಿನ್ನೆ ಇದರ ಬಗ್ಗೆ ಸಿಳಿವಿ ನೀಡಿದ್ದರು. ಹೌದಾ ಸರ್ ಅಂತ ನಗರದಲ್ಲಿಂದು ಪತ್ರಕರ್ತರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಕೇಳಿದಾಗ ತನಗಂತೂ ಅದರ ಬಗ್ಗೆ ಮಾಹಿತಿ ಇಲ್ಲ, ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜಿನಿಕವಾಗಿ ಚರ್ಚಿಸಲಾಗಲ್ಲ ಅಂತ ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತಂದ ಶ್ರೇಯಸ್ಸು ಕೇವಲ ಶಿವಕುಮಾರ್ ಸಲ್ಲಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ಹೇಳಿರುವುದನ್ನು ಅವರ ಗಮನಕ್ಕೆ ತಂದಾಗ, ಗೆಲುವಿನ ಕ್ರೆಡಿಟ್ ತನಗೆ ಸಲ್ಲಬೇಕು ತಾನ್ಯಾವತ್ತೂ ಹೇಳಿಲ್ಲ, ಕಾಂಗ್ರೆಸ್ ಪಕ್ಷದ ಭಾರೀ ಯಶಸ್ಸಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಕಾರಣ, ಗ್ರಾಮೀಣ ಭಾಗಗಳ ಕಾರ್ಯರ್ತರು ಸಹ ಬೆವರು ಸುರಿಸಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ