ನಾಳೆ ರಾಜೀನಾಮೆ ಕೊಡ್ತೀನಿ ಎಂದು CM ಹೇಳಿದ್ದಾರೆ: ಬಹಿರಂಗ ಪಡಿಸಿದ ಕಾಂಗ್ರೆಸ್ ಹಿರಿಯ ಶಾಸಕ

Updated on: May 27, 2026 | 5:01 PM

ಕರ್ನಾಟಕ ಕಾಂಗ್ರೆಸ್​​ನಲ್ಲಿನ  (Karnataka Congress) ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಸದ್ಯ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದ್ರೆ ನಾಳೆಯೇ (ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದರ ಮಧ್ಯೆ ಇದೀಗ ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಸಿದ್ದರಾಮಯ್ಯನವರ ರಾಜೀನಾಮೆಯನ್ನು ಬಹಿರಂಗಪಡಿಸಿದ್ದಾರೆ.

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿನ  (Karnataka Congress) ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಸದ್ಯ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದ್ರೆ ನಾಳೆಯೇ (ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದರ ಮಧ್ಯೆ ಇದೀಗ ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಸಿದ್ದರಾಮಯ್ಯನವರ ರಾಜೀನಾಮೆಯನ್ನು ಬಹಿರಂಗಪಡಿಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದೇಶಪಾಂಡೆ. ನಾಳೆ ರಾಜೀನಾಮೆ ಕೊಡ್ತೀನಿ ಎಂದು ಸಿಎಂ ಹೇಳಿದ್ದು, ನಾವು ರಾಜೀನಾಮೆ ಕೊಡಬೇಡಿ ಎಂದು ಹೇಳಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ನಾಳೆ (ಮೇ 28) ರಾಜೀನಾಮೆಯನ್ನು ಖಚಿತಪಡಿಸಿದರು.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More