ಮೈಸೂರು ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಹಸಿರು, ಬಿಳಿ-ಕೇಸರಿ ಧ್ವಜ ನೀಡಿ ಅಧಿಕಾರ ಹಸ್ತಾಂತರ

Edited By:

Updated on: Oct 04, 2026 | 8:16 PM

ಮೈಸೂರು ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹ ಕಾರ್ಯಕ್ರಮ ಇಂದು (ಅಕ್ಟೋಬರ್ 04) ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಆದ್ರೆ, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇವಾದಳ ಎಡವಟ್ಟು ಮಾಡಿದೆ. ನಿ

ಮೈಸೂರು, (ಅಕ್ಟೋಬರ್ 04): ಮೈಸೂರು ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹ ಕಾರ್ಯಕ್ರಮ ಇಂದು (ಅಕ್ಟೋಬರ್ 04) ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಆದ್ರೆ, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇವಾದಳ ಎಡವಟ್ಟು ಮಾಡಿದೆ. ನಿರ್ಗಮಿತ ಅಧ್ಯಕ್ಷ ಬಿ.ಜೆ.ವಿಜಯಕುಮಾರ್‌ ಅವರು ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣಗೆ ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಿದರು. ಆದರೆ, ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟವನ್ನು ಹಸಿರು, ಬಿಳಿ, ಕೇಸರಿ ರೀತಿ ಉಲ್ಟಾ ಕಟ್ಟಲಾಗಿದ್ದ ಧ್ವಜವನ್ನು ನೀಡಲಾಗಿದೆ. ಇದನ್ನು ಎಂಎಲ್‌ಸಿ ಕೆ.ಶಿವಕುಮಾರ್ ಅವರು ಹೇಳಿದ ಬಳಿಕ ಎಚ್ಚೆತ್ತುಕೊಂಡ ಮುಖಂಡರು. ಧ್ವಜವನ್ನು ಸರಿಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More