Congress to Protest; ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರ ವಿರೋಧಿಸಿ ಜುಲೈ 12 ರಂದು ಪ್ರತಿಭಟನೆ: ಡಿಕೆ ಶಿವಕುಮಾರ್

|

Updated on: Jul 10, 2023 | 7:06 PM

ದೇಶದ ಎಲ್ಲ ವಿರೋಧ ಪಕ್ಷಗಳು ಈಗ ರಾಹುಲ್ ಗಾಂಧಿ ಅವರೊಂದಿಗೆ ನಿಂತುಕೊಳ್ಳಬೇಕಿದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಯಾವತ್ತೂ ರಾಷ್ಟ್ರದ ಸ್ವಾಭಿಮಾನಕ್ಕೆ ಧಕ್ಕೆಯಾಗುವ ರೀತಿ ಮಾತಾಡಿಲ್ಲ, ದಿನೇದಿನೆ ಹೆಚ್ಚುತ್ತಿರುವ ಜನಪ್ರಿಯತೆಯಿಂದ ಅವರ ವಿರುದ್ಧ ಷಡ್ಯಂತ್ರ (conspiracy) ರಚಿಸಲಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ದೇಶದ ಉದ್ದಗಲಕ್ಕೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಮತ್ತು ನಗರದ ಫ್ರೀಡಂ ಪಾರ್ಕ್ ನಲ್ಲಿ ಜುಲೈ 12 ರಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ರವರೆಗೆ ಮೌನ ಪ್ರತಿಭಟನೆಯನ್ನು ರಾಜ್ಯ ಕಾಂಗ್ರೆಸ್ ಕಾರ್ಯಕರ್ತರು ನಡೆಸುವರೆಂದು ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತಾಡಿದ ಶಿವಕುಮಾರ್ ನ್ಯಾಯಾಲಯದ ತೀರ್ಪಿನ ಬಗ್ಗೆ ಕಾಂಗ್ರೆಸ್ ಕಾಮೆಂಟ್ ಮಾಡೋದಿಲ್ಲ ಆದರೆ, ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ರಾಜಕೀಯ ಪಿತೂರಿಯನ್ನು ಖಂಡಿಸುತ್ತಾ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆಯ ನಂತರ ಕರ್ನಾಟಕಕ್ಕೆ ಹೆಚ್ಚಿನ ಶಕ್ತಿ ಸಿಕ್ಕಿದೆ, ದೇಶದ ಎಲ್ಲ ವಿರೋಧ ಪಕ್ಷಗಳು ಈಗ ಅವರೊಂದಿಗೆ ನಿಂತುಕೊಳ್ಳಬೇಕಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ