ಡಿ.14ರಂದು ದೆಹಲಿಯಲ್ಲಿ ಮೊಳಗಲಿದೆ ವೋಟ್ ಚೋರಿ ಕೂಗು; ರಾಜ್ಯ ನಾಯಕರಿಗೆ ಡಿಕೆಶಿ ಕೊಟ್ಟ ಕರೆ ಏನು?

Updated on: Dec 07, 2025 | 2:15 PM

ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ'ವೋಟ್ ಚೋರಿ' ಆರೋಪ ಹಿನ್ನೆಲೆಯಲ್ಲಿ ಡಿಸೆಂಬರ್ 14 ರಂದು ದೆಹಲಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಲ್ಲಾ ನಾಯಕರಿಗೆ ಭಾಗವಹಿಸಲು ಕರೆ ನೀಡಿದ್ದಾರೆ. ಸಿಎಂ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯದ ಸಚಿವರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 15,000 ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿಗೆ ಕರೆದೊಯ್ಯಲು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದು, ಇದು ಕರ್ನಾಟಕ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಪ್ರತಿಭಟನೆಗಾಗಿ ವಿಶೇಷ ರೈಲಿಗೆ ಕಾಂಗ್ರೆಸ್ ನಾಯಕರು ಮನವಿ ಸಲ್ಲಿಸಿದ್ದಾರೆ. ರೈಲ್ವೆ ಇಲಾಖೆ ಇದಕ್ಕೆ ನಿರಾಕರಿಸಿದ್ದು, ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದೆ.

ಬೆಂಗಳೂರು, ಡಿಸೆಂಬರ್ 07: ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ’ವೋಟ್ ಚೋರಿ’ ಆರೋಪ ಹಿನ್ನೆಲೆಯಲ್ಲಿ ಡಿಸೆಂಬರ್ 14 ರಂದು ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಲ್ಲಾ ನಾಯಕರಿಗೆ ಭಾಗವಹಿಸಲು ಕರೆ ನೀಡಿದ್ದಾರೆ. ಸಿಎಂ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯದ ಸಚಿವರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 15,000 ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿಗೆ ಕರೆದೊಯ್ಯಲು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದು, ಇದು ಕರ್ನಾಟಕ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಪ್ರತಿಭಟನೆಗಾಗಿ ವಿಶೇಷ ರೈಲಿಗೆ ಕಾಂಗ್ರೆಸ್ ನಾಯಕರು ಮನವಿ ಸಲ್ಲಿಸಿದ್ದಾರೆ. ರೈಲ್ವೆ ಇಲಾಖೆ ಇದಕ್ಕೆ ನಿರಾಕರಿಸಿದ್ದು, ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಡಿಸಿಎಂ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.