ಕೇಂದ್ರದಲ್ಲೂ ಬೆಳೆಯುತ್ತಿರುವ ನನ್ನ ಪ್ರಭಾವ ಕುಂಠಿತಗೊಳಿಸುವುದು ಕಾಂಗ್ರೆಸ್ ಹುನ್ನಾರ: ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 30, 2024 | 2:40 PM

ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ತಾನು ಕಾಂಗ್ರೆಸ್ ನಾಯಕರ ಕುತಂತ್ರಗಳನ್ನು ಅರ್ಥಮಾಡಿಕೊಂಡಿರುವುದಾಗಿ ಹೇಳಿದ ಕುಮಾರಸ್ವಾಮಿ ತಮಗೆ ಕೇವಲ 19 ಸ್ಥಾನ ದಕ್ಕಿದ್ದರೂ 12 ಶಾಸಕರನ್ನು ಖರೀದಿಸುವ ಪ್ರಯತ್ನ ಕಾಂಗ್ರೆಸ್ ಪಕ್ಷದಿಂದ ನಡೆಯಿತು, ಅದರೆ ಅದು ಸಾಧ್ಯವಾಗದೆ ಹೋಗಿದ್ದು ಬೇರೆ ವಿಚಾರ ಎಂದರು.

ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಸ್ಥಳೀಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸುವುದು ಅನಿವಾರ್ಯವಾಗಿತ್ತು, ಆದರೆ ಕಾಂಗ್ರೆಸ್ ನಾಯಕರ ಟಾರ್ಗೆಟ್ ಅವರಲ್ಲ, ನಿಖಿಲ್​ರನ್ನು ಸೋಲಿಸುವ ಮೂಲಕ ಕೇಂದ್ರದಲ್ಲಿ ಮಂತ್ರಿಯಾಗಿ ಹೆಚ್ಚುತ್ತಿರುವ ತನ್ನ ಪ್ರಭಾವ ಮತ್ತು ಬೆಳವಣಿಗೆಯನ್ನು ಕುಂಠಿತಗೊಳಿಸುವುದು ಅವರ ಉದ್ದೇಶವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಾನು ವಲಸಿಗನಲ್ಲ, ಕನ್ನಡದ ಮಣ್ಣಲ್ಲಿ ಹುಟ್ಟಿದವನು, ರಾಮನಗರ ಕರ್ಮಭೂಮಿ: ಹೆಚ್ ಡಿ ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.