ಮೈತ್ರಿ ಸರ್ಕಾರ ರಚಿಸಲು ಜೆಡಿಎಸ್ ನೊಂದಿಗೆ ಸ್ನೇಹ ಬೆಳೆಸುವಾಗ ಕಾಂಗ್ರೆಸ್ ಅಸಹಾಯಕ ಸ್ಥಿತಿಯಲ್ಲಿರಲಿಲ್ಲವೇ? ಬಸವರಾಜ ಬೊಮ್ಮಾಯಿ

ಅರುಣ್​ ಕುಮಾರ್​ ಬೆಳ್ಳಿ

Updated on: Sep 11, 2023 | 1:10 PM

ಸರಕಾರದ ವೈಫಲ್ಯಗಳ ವಿರುದ್ಧ ಹೋರಾಡಲು, ಜೆಡಿಎಸ್ ಮತ್ತು ಬಿಜೆಪಿ ಜೊತೆಗೂಡುತ್ತಿವೆ ಮತ್ತು ಈ ಬಗ್ಗೆ ಪಕ್ಷಗಳ ಉನ್ನತ ನಾಯಕರ ನಡುವೆ ಮಾತುಕತೆ ನಡೆಯುತ್ತಿವೆ ಎಂದು ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿ ಬಿಜೆಪಿ ನಾಯಕತ್ವದ ಬಗ್ಗೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ನೀಡಿದ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ, ಶೆಟ್ಟರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಅಂತ ಹೇಳಿದರು.

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಅಸಹಾಯಕ ಸ್ಥಿತಿಯಲ್ಲಿರುವುದರಿಂದ ಮೈತ್ತ್ರಿಗೆ ಮುಂದಾಗಿವೆ ಎಂದು ಕಾಂಗ್ರೆಸ್ ನಾಯಕರಿ ಆಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ; ಹಿಂದೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ (coalition government) ಮಾಡಿದಾಗ ಕಾಂಗ್ರೆಸ್ ಅಸಹಾಯಕ ಸ್ಥಿತಿಯಲ್ಲಿರಲಿಲ್ಲವೇ ಅಂತ ಪ್ರಶ್ನಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದೆ, ಭ್ರಷ್ಟಾಚಾರ ತಾಂಡವಾಡುತ್ತಿದೆ ಮತ್ತು ಅಭಿವೃದ್ಧಿ ಕಾಮಗಾರಿಗಳು (development works) ಸ್ಥಗಿತಗೊಂಡಿವೆ-ಸರಕಾರದ ವೈಫಲ್ಯಗಳ ವಿರುದ್ಧ ಹೋರಾಡಲು, ಜೆಡಿಎಸ್ ಮತ್ತು ಬಿಜೆಪಿ ಜೊತೆಗೂಡುತ್ತಿವೆ ಮತ್ತು ಈ ಬಗ್ಗೆ ಪಕ್ಷಗಳ ಉನ್ನತ ನಾಯಕರ ನಡುವೆ ಮಾತುಕತೆ ನಡೆಯುತ್ತಿವೆ ಎಂದು ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿ ಬಿಜೆಪಿ ನಾಯಕತ್ವದ ಬಗ್ಗೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ನೀಡಿದ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ, ಶೆಟ್ಟರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.