AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ಚುನಾವಣೆ ನಡೆಯಲಿರುವ ಎಲ್ಲ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ: ಜಮೀರ್ ಅಹ್ಮದ್

ಉಪ ಚುನಾವಣೆ ನಡೆಯಲಿರುವ ಎಲ್ಲ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ: ಜಮೀರ್ ಅಹ್ಮದ್

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2024 | 7:49 PM

Share

ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯೇ ಗೆಲ್ಲೋದು ಅಂತ ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಿದ್ದಾರೆ, ಆದರೆ ಮಾಧ್ಯಮ ಪ್ರತಿನಿಧಿಗಳು ಬರೆದಿಟ್ಟುಕೊಳ್ಳಿ, ಅಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕನಿಷ್ಠ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಮೀರ್ ಅಹ್ಮದ್ ಎದೆ ತಟ್ಟಿಕೊಂಡು ಹೇಳಿದರು.

ಹುಬ್ಬಳ್ಳಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್, ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೇಳಿರುವುದದು ಸತ್ಯ, ಅದರೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗುರುವುದಾಗಿ ಹೇಳಿ ಕಾಂಗ್ರೆಸ್ ಯಾವತ್ತಿಗೂ ಹೈಕಮಾಂಡ್ ಆಧಾರಿತ ಪಕ್ಷ, ಅದು ಹಾಕಿದ ಗೆರೆಯನ್ನು ಯಾರೂ ದಾಟುವುದಿಲ್ಲ ಎಂದು ಹೇಳಿದರು. ಉಪ ಚುನಾವಣೆ ನಡೆಯುವ ಎಲ್ಲ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸ ಅವರು ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     ಸಚಿವ ಜಮೀರ್ ಅಹ್ಮದ್ ಖಾನ್ ಗೆ ಶಾಸಕ ಎನ್ ಹೆಚ್ ಕೋನರೆಡ್ಡಿ ಮನೆಯಲ್ಲಿ ಭರ್ಜರಿ ಔತಣ!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More