Karnataka Assembly Polls; ಕಾಂಗ್ರೆಸ್ ಪಕ್ಷ 130-150 ಸ್ಥಾನ ಪಡೆದು ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

|

Updated on: May 10, 2023 | 1:36 PM

ಕಳೆದ 4 ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ಹೇಳಿಕೊಳ್ಳಲು ಅವರಲ್ಲಿ ಏನೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು: ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ತಮ್ಮ ಕ್ಷೇತ್ರದಲ್ಲಿ ಮತ ಚಲಾಯಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ರಾಜ್ಯದ ಎಲ್ಲ ಅರ್ಹ ಮತದಾರರಿಗೆ ಮನೆಯಿಂದ ಹೊರಬಂದು ವೋಟು ಮಾಡುವಂತೆ ಮನವಿ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ಹಣದ ಹೊಳೆ ಹರಿದಿರುವ ಬಗ್ಗೆ ಮಾತಾಡಿದ ಅವರು ನೇರವಾಗಿ ಬಿಜೆಪಿಯನ್ನು (BJP) ದೂರಿದರು. ಕಳೆದ 4 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ಅವರಿಗೆ ಹೇಳಿಕೊಳ್ಳಲು ಏನೂ ಇಲ್ಲ, ಹಾಗಾಗಿ ಹಣ ಚೆಲ್ಲಿ ವೋಟು ಪಡೆಯುವ ಪ್ರಯತ್ನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ (Congress) ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸಗಳ ಆಧಾರದ ಮೇಲೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ ಅವರು ತಮ್ಮ ಪಕ್ಷಕ್ಕೆ 130-150 ಸ್ಥಾನಗಳು ದಕ್ಕಲಿವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ