Assembly Polls | ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೆ ಬರುವುದು ಖಚಿತ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Feb 03, 2023 | 12:04 PM

ಗಮನಿಸಬೇಕಾದ ಅಂಶವೇನೆಂದರೆ, ಎಲ್ಲ ಮೂರು ಪಕ್ಷಗಳು-ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆಯೇರುವ ವಿಶ್ವಾಸ ವ್ಯಕ್ತಪಡಿಸುತ್ತಿವೆ.

ಬೆಂಗಳೂರು:  ರಾಜ್ಯ ವಿಧಾನ ಸಭೆ ಚುನಾವಣೆಗಳು (assembly polls) ಹತ್ತಿರವಾಗುತ್ತಿದಂತೆಯೇ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳು ಆರಂಭಗೊಂಡಿವೆ. ಬೆಂಗಳೂರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತಾಡಿದ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar), ಇನ್ನು 50 ದಿನಗಳ ನಂತರ ಬಿಜೆಪಿ ಸರ್ಕಾರದಲ್ಲಿರುವುದಿಲ್ಲ, ತಾವು ಈಗಾಗಲೇ ಮೂರು ಬಾರಿ ಸಮೀಕ್ಷೆ ಮಾಡಿಸಿದ್ದು ಕಾಂಗ್ರೆಸ್ 160 ಸ್ಥಾನಗಳಲ್ಲಿ ಗೆಲ್ಲಬಹುದಾದ ಸೂಚನೆಗಳು ಸಿಕ್ಕಿವೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಅವರು 136 ಸ್ಥಾನಗಳನ್ನು ಖಚಿತವಾಗಿ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಹೇಳಿದರು. ಗಮನಿಸಬೇಕಾದ ಅಂಶವೇನೆಂದರೆ, ಎಲ್ಲ ಮೂರು ಪಕ್ಷಗಳು-ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆಯೇರುವ ವಿಶ್ವಾಸ ವ್ಯಕ್ತಪಡಿಸುತ್ತಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Feb 03, 2023 10:59 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.