ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಯುವಕರಿಗೆ ವರ್ಷಕ್ಕೆ ರೂ. 1 ಲಕ್ಷ ಆರ್ಥಿಕ ನೆರವು ನೀಡಲಿದೆ: ಡಿಕೆ ಶಿವಕುಮಾರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಯುವಕರಿಗೆ ವರ್ಷಕ್ಕೆ ರೂ. 1 ಲಕ್ಷ ಆರ್ಥಿಕ ನೆರವು ನೀಡಲಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 12, 2024 | 7:21 PM

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾನು ಸಹಿಮಾಡಿ ಜನರಿಗೆ ಲಭ್ಯವಾಗುವಂತೆ ಮಾಡಿದ ಗ್ಯಾರಂಟಟಿ ಯೋಜನೆಗಳ ಹಾಗೆಯೇ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಾರ್ಷಿಕ ತಲಾ ಒಂದು ಲಕ್ಷ ರೂ. ನೀಡುವ ಗ್ಯಾರಂಟಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಕಲಬುರಗಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕಲಬುರಗಿ ಸಮಾವೇಶದಲ್ಲಿ (Kalaburagi Congress Convention) ಅಬ್ಬರದ ಭಾಷಣ ಮಾಡಿದರು. ಹಿಂದೊಮ್ಮೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಅಲಂಕರಿಸಿದ್ದ ಸ್ಥಾನದಲ್ಲಿ ಕಲಬುರಗಿ ಭಾಗದ ಧೀಮಂತ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಸೀನರಾಗಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಅವರು ₹2,000 ಕೋಟಿ ವೆಚ್ಚದಲ್ಲಿ ಈಎಸ್ ಐ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ ಮತ್ತು ಎಲ್ಲ ಬಡ ಕುಟುಂಬಗಳಿಗೆ ₹ 25 ಲಕ್ಷ ಮೊತ್ತದ ಆರೋಗ್ಯ ವಿಮೆಯ ಸವಲತ್ತು ಮಾಡಿಸಿಕೊಟ್ಟಿದ್ದಾರೆ ಎಂದು ಶಿವಕುಮಾರ್ ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾನು ಸಹಿಮಾಡಿ ಜನರಿಗೆ ಲಭ್ಯವಾಗುವಂತೆ ಮಾಡಿದ ಗ್ಯಾರಂಟಟಿ ಯೋಜನೆಗಳ ಹಾಗೆಯೇ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಾರ್ಷಿಕ ತಲಾ ಒಂದು ಲಕ್ಷ ರೂ. ನೀಡುವ ಗ್ಯಾರಂಟಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಮಹಾಲಕ್ಷ್ಮಿ, ಯುವನ್ಯಾಯ್ ಯೋಜನೆಗಳಲ್ಲದೆ, ರೈತರ ಸಾಲಮನ್ನಾ ಮತ್ತು ಶ್ರಮಿಕ ನ್ಯಾಯ್ ಯೋಜನೆಗಳನ್ನೂ ಕಾಂಗ್ರೆಸ್ ಪಕ್ಷ ಆಧಿಕಾರಕ್ಕೆ ಬಂದರೆ ಜಾರಿಗೊಳಿಸಿ ಬಡವರಿಗೆ, ರೈತರಿಗೆ ಮತ್ತು ಶ್ರಮಿಕರಿಗೆ ನೆರವಾಗಲಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ರಾಜ್ಯವನ್ನು ಒಂದು ಸುತ್ತು ಹಾಕಿದ ಬಳಿಕ ಕಾಂಗ್ರೆಸ್​ಗೆ ಎಷ್ಟು ಸ್ಥಾನ ಸಿಗಲಿವೆ ಅಂತ ಹೇಳ್ತೀನಿ: ಡಿಕೆ ಶಿವಕುಮಾರ್