ಕರ್ನಾಟಕದಂತೆಯೇ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಜಾರಿಗೆ ತರಲಿದೆ: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಂತೆಯೇ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಜಾರಿಗೆ ತರಲಿದೆ: ಮಲ್ಲಿಕಾರ್ಜುನ ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 17, 2024 | 7:13 PM

ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ ಖರ್ಗೆಯವರ ರಾಹುಲ್ ರನ್ನು ಭಾಷಣಕ್ಕೆ ಆಹ್ವಾನಿಸುವ ಮೊದಲು ಜೈ ಹಿಂದ್ ಮತ್ತು ಜೈ ಕಾಂಗ್ರೆಸ್ ಅಂತ ಜೋರಾಗಿ ಘೋಷಣೆ ಕೂಗಿದರು.

ಕೋಲಾರ: ಮಂಡ್ಯದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿಯಾದ ಬಳಿಕ ರಾಹುಲ್ ಗಾಂಧಿ (Rahul Gandhi), ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಮತ್ತು ಇತರ ಕಾಂಗ್ರೆಸ್ ನಾಯಕರು ಕೋಲಾರಕ್ಕೆ ದೌಡಾಯಿಸಿದರು. ಈ ವಿಡಿಯೋದದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಅಂತಿಮ ಭಾಗವನ್ನು ಕೇಳಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಂತೆಯೇ ಅಖಿಲ ಭಾರತ ಮಟ್ಟದಲ್ಲಿ ತಮ್ಮ ಪಕ್ಷವು 5 ನ್ಯಾಯಗಳ ಅಡಿಯಲ್ಲಿ 25 ಗ್ಯಾರಂಟಿಗಳನ್ನು ಘೋಷಿಸಿದೆ ಮತ್ತು ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತದಾರರು ಅಧಿಕಾರಕ್ಕೆ ತಂದರೆ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರು ಅವೆಲ್ಲವನ್ನೂ ಜಾರಿಗೊಳಿಸಲು ಕಟಿಬದ್ಧರಾಗಿದ್ದಾರೆ ಎಂದು ಖರ್ಗೆ ಹೇಳಿದರು. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ ಖರ್ಗೆಯವರ ರಾಹುಲ್ ರನ್ನು ಭಾಷಣಕ್ಕೆ ಆಹ್ವಾನಿಸುವ ಮೊದಲು ಜೈ ಹಿಂದ್ ಮತ್ತು ಜೈ ಕಾಂಗ್ರೆಸ್ ಅಂತ ಜೋರಾಗಿ ಘೋಷಣೆ ಕೂಗಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಮ್ಮೆ ರಾಹುಲ್ ಅವರನ್ನು ಆಹ್ವಾನಿಸಿದ ಬಳಿಕ ವಯನಾಡ್ ಸಂಸದ ಕಿವಿಗಡಚಿಕ್ಕುವ ಚಪ್ಪಾಳೆಗಳ ನಡುವೆ ಪೋಡಿಯಂಗೆ ಬಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Rahul Gandhi: ಮಂಡ್ಯದಲ್ಲಿ ರಾಹುಲ್​ ಗಾಂಧಿ ಅಬ್ಬರದ ಭಾಷಣ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ