ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ
ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಆರ್ ಅಶೋಕ ಅವರು, ಜಾತಿಗಣತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಅಂತ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಬಗ್ಗೆ ಕೇಳಿದಾಗ ಸಿದ್ದರಾಮಯ್ಯ; ಪಾಪ, ಈಗಷ್ಟೇ ಆ ಜವಾಬ್ದಾರಿ ಸಿಕ್ಕಿದೆ, ಹಾಗಾಗಿ ಬಾಯಿಗೆ ಬಂದಿದ್ದನ್ನೆಲ್ಲ ಮಾತಾಡುತ್ತಿದ್ದಾರೆ ಅಂತ ಹೇಳಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರಕ್ಕಾಗಿ ಇಂದು ತೆಲಂಗಾಣಗೆ (Telangana) ತೆರಳಿದರು. ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ವಿಧಾನ ಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ನವೆಂಬರ್ 30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ, ಹಾಗಾಗಿ ಕೊನೆಯ ಸುತ್ತಿನ ಪ್ರಚಾರಕ್ಕೆ ಹೋಗುತ್ತಿರುವುದಾಗಿ ತಿಳಿಸಿದರು. ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ (Congress party) ಗೆಲ್ಲುವ ಅವಕಾಶ ಇದೆಯಾ ಅಂತ ಕೇಳಿದಾಗ ಶತ ಪ್ರತಿಶತದಷ್ಟು ಭರವಸೆ ಇದೆ, ಗೆದ್ದೇ ಗೆಲ್ತೀವಿ ಅಂತ ಮುಖ್ಯಮಂತ್ರಿ ಹೇಳಿದರು. ಎಷ್ಟು ಸೀಟು ಬರಬಹುದು ಸರ್ ಅಂತ ಕೇಳಿದರೆ, ಹಾಗೆಲ್ಲ ಶಾಸ್ತ್ರ ಹೇಳೋದಿಕ್ಕೆ ಆಗಲ್ಲ ಅಂತ ಸಿಡುಕಿ ಸ್ಪಷ್ಟ ಬಹುಮತ ಸಿಗಲಿದೆ ಅನ್ನುತ್ತಾರೆ. ಆದರೆ, ಕರ್ನಾಟಕ ವಿಧಾನಸಭಾ ಚುನಾವಣೆಯಲಲ್ಲಿ ಅವರು ಕಾಂಗ್ರೆಸ್ ಪಕ್ಷ 150 ಕ್ಕಿಂಯ ಹೆಚ್ಚು ಸೀಟು ಗೆಲ್ಲಲಿದೆ ಭವಿಷ್ಯವಾಣಿ ನುಡಿದಿದ್ದರು!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ