ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾಲ

Edited By:

Updated on: Mar 20, 2026 | 9:49 PM

ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೂಪಾಯಿ ಕುಸಿತ, ಗ್ಯಾಸ್ ಮತ್ತು ಇಂಧನ ಬೆಲೆ ಏರಿಕೆ, ಮತ್ತು ನಿರುದ್ಯೋಗದಂತಹ ಆರ್ಥಿಕ ಬಿಕ್ಕಟ್ಟುಗಳ ಬಗ್ಗೆ ಬಿಜೆಪಿ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಜನತೆ ಕಾಂಗ್ರೆಸ್‌ನೊಂದಿಗಿದ್ದಾರೆ, ನಮ್ಮ ಪ್ರಣಾಳಿಕೆ ಈಡೇರಿಸಿದ್ದೇವೆ ಎಂದು ಹೇಳಿದರು.

ಬೆಂಗಳೂರು, ಮಾರ್ಚ್​ 20: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ. ಟಿಕೆಟ್​ ಬೇಕೆಂದು ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತೆ. ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಕರ್ನಾಟಕ ಜನ ನಮ್ಮ ಪರ ಇದ್ದಾರೆ. ಹಿಂದೆಯೂ ಚುನಾವಣೆ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More