ಮಹಿಳೆ ಕೆನ್ನೆಗೆ ಬಾರಿಸಿದ ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 24, 2022 | 3:01 PM

ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಧರಣಿ ನಡೆಸಿದ ಕಾರ್ಯಕರ್ತರು ಸೋಮಣ್ಣ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಬೆಂಗಳೂರು: ಕಳೆದ ಶನಿವಾರ ಚಾಮರಾಜನಗರ ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರಲ್ಲಿ ತಮ್ಮನ್ನು ನಮಸ್ಕರಿಸಿಲು ಬಂದು ಮಹಿಳೆಯೊಬ್ಬರ ಕೆನ್ನೆಗೆ ಹೊಡೆದ ವಸತಿ ಖಾತೆ ಸಚಿವ ವಿ ಸೋಮಣ್ಣ (V Somanna) ಅವರ ವರ್ತನೆ ವಿರುದ್ಧ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು (women workers) ರೊಚ್ಚಿಗೆದ್ದು ಸೋಮವಾರ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಭವನದ (Congress Bhavan) ಮುಂದೆ ಧರಣಿ ನಡೆಸಿದ ಕಾರ್ಯಕರ್ತರು ಸೋಮಣ್ಣ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.