ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಮುಂಜಾಗ್ರತಾ ಕ್ರಮವಾಗಿ ಸಖರಾಯಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಸಖರಾಯಪಟ್ಟಣದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಎಲ್ಲೆಡೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ವಿಡಿಯೋ ಇಲ್ಲಿದೆ.
ಚಿಕ್ಕಮಗಳೂರು, ಡಿಸೆಂಬರ್ 6: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ ಪ್ರಕರಣವು ಆತಂಕಕ್ಕೆ ಕಾರಣವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಸಖರಾಯಪಟ್ಟಣದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಜಿಲ್ಲಾ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
