ಬಳ್ಳಾರಿಯಲ್ಲಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಬುಲೆಟ್ ಯಾರದೋ, ಯಾವ ಗನ್‌ನಿಂದ ಬಂದಿದೆ ಎಂದು ಸ್ಪಷ್ಟಪಡಿಸಲು ತನಿಖೆ ನಡೆಸುವುದು ಅಗತ್ಯ ಎಂದಿದ್ದಾರೆ. ಬಿಜೆಪಿ ಅಥವಾ ಕಾಂಗ್ರೆಸ್ ಕಾರ್ಯಕರ್ತರ ಗನ್‌ನಿಂದ ಗುಂಡು ಬಂದಿದೆಯೇ ಎಂದು ಪತ್ತೆಹಚ್ಚುವಂತೆ ಸೂಚಿಸಿದ್ದಾರೆ.
ಬಳ್ಳಾರಿ, ಜನವರಿ 2: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಗುಂಡೇಟಿಗೆ ಬಲಿಯಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಘಟನೆಯಲ್ಲಿ ಬಳಕೆಯಾದ ಬುಲೆಟ್‌ನ ಮೂಲದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದುನ ಅವರು ಹೇಳಿದ್ದಾರೆ. “ಯಾರ ಗನ್‌ನಿಂದ ಬುಲೆಟ್ ಬಂದಿದೆ ಎಂಬುದು ಗೊತ್ತಾಗಬೇಕು. ಅದು ಬಿಜೆಪಿ ಅವರ ಗನ್‌ನಿಂದ ಬಂದಿದೆಯಾ? ಇಲ್ಲ ಕಾಂಗ್ರೆಸ್‌ನವರ ಗನ್‌ನಿಂದ ಬಂದಿದೆಯಾ?” ಎಂದು ಪತ್ತೆಹಚ್ಚಬೇಕಿದೆ ಎಂದು ಸಿಎಂ ಹೇಳಿದ್ದಾರೆ.
ಬಳ್ಳಾರಿ ಪೊಲೀಸ್ ವರಿಷ್ಠರು ಖಾಸಗಿ ಬುಲೆಟ್ ಎಂದು ಮಾಹಿತಿ ನೀಡಿದ್ದಾರೆ. ಸತೀಶ್ ರೆಡ್ಡಿ ಅವರು ತಮ್ಮ ಭದ್ರತೆಗಾಗಿ ಗನ್ ಇಟ್ಟುಕೊಂಡಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ರಾಜಶೇಖರ್ ರೆಡ್ಡಿ ಅವರಿಗೆ ತಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ರಾಜಶೇಖರ್ ರೆಡ್ಡಿ ಅವರ ಸಾವಿಗೆ ಕಾರಣವಾದ ಬುಲೆಟ್ ಮತ್ತು ಗನ್‌ನ ಮೂಲದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

