ಚಿಕ್ಕಬಳ್ಳಾಪುರ: ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದ ಪೋಸ್ಟರ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ ನಡೆದಿದೆ. ಪ್ರದೀಪ್ ಈಶ್ವರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕುತ್ತಿಲ್ಲ ಅಂತ ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ, ಅ.02: ಇಂದು ಗಾಂಧಿ ಜಯಂತಿ (Gandhi Jayanti) ಹಿನ್ನೆಲೆ ಚಿಕ್ಕಬಳ್ಳಾಪುರ ನಗರದ ನೂತನ ಗಾಂಧಿ ಭವನದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರ್ಯಕ್ರಮದ ಪೋಸ್ಟರ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಫೋಟೋ ಹಾಕಿಲ್ಲ ಎಂದು ಗಲಾಟೆ ನಡೆದಿದೆ. ಪ್ರದೀಪ್ ಈಶ್ವರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್ ಸಮ್ಮುಖದಲ್ಲೇ ಗಲಾಟೆಯಾಗಿದೆ. ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕುತ್ತಿಲ್ಲ ಅಂತ ಆಕ್ರೋಶ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Loading...
Unable to load recommendations.
Follow Us