ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಕೇಂದ್ರ ಸಚಿವ ಸೋಮಣ್ಣ ಮೇಲೆಯೇ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಿರುವ ಘಟನೆ ನಡೆದಿದೆ. ಇಂದು (ಜನವರಿ 05) ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಗಲಾಟೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕೈ ಕಾರ್ಯಕರ್ತರು, ಸಚಿವ ಸೋಮಣ್ಣ ಅವರತ್ತ ಕುರ್ಚಿ ತೂರಿದ್ದಾರೆ. ಈ ವೇಳೆ ಅಂಗರಕ್ಷಕರು ಕುರ್ಚಿಗಳನ್ನ ತಡೆದಿದ್ದಾರೆ. ಇದರಿಂದ ಅನಾಹುತ ತಪ್ಪಿದಂತಾಗಿದೆ.
ಕೊಪ್ಪಳ, (ಜನವರಿ 05): ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಕೇಂದ್ರ ಸಚಿವ ಸೋಮಣ್ಣ (Minister V Somanna )ಮೇಲೆಯೇ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಿರುವ ಘಟನೆ ನಡೆದಿದೆ. ಇಂದು (ಜನವರಿ 05) ಕೊಪ್ಪಳ (Koppal) ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಗಲಾಟೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕೈ ಕಾರ್ಯಕರ್ತರು, ಸಚಿವ ಸೋಮಣ್ಣ ಅವರತ್ತ ಕುರ್ಚಿ ತೂರಿದ್ದಾರೆ. ಈ ವೇಳೆ ಅಂಗರಕ್ಷಕರು ಕುರ್ಚಿಗಳನ್ನ ತಡೆದಿದ್ದಾರೆ. ಇದರಿಂದ ಅನಾಹುತ ತಪ್ಪಿದಂತಾಗಿದೆ.

