Prajadhvani Yatre: ಭದ್ರಾವತಿಯಲ್ಲಿ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 08, 2023 | 6:22 PM

ಪೋಡಿಯಂ ಬಳಿ ಮೈಕ್ ಹಿಡಿದು ನಿಂತಿದ್ದ ಕಾರ್ಯಕರ್ತರಿಬ್ಬರು ಎಲ್ಲರೂ ನಮ್ಮ ಕಾರ್ಯಕರ್ತರೇ ಅಂತ ಅರಚುತ್ತಾ ಹೇಳಿದರೂ ತಲೆಮೇಲೆ ಗಾಂಧಿಟೋಪಿ ಧರಿಸಿದ್ದ ಕಾರ್ಯಕರ್ತರು ಸಮಾಧಾನಗೊಳ್ಳಲಿಲ್ಲ.

ಶಿವಮೊಗ್ಗ: ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಪ್ರಜಾಧ್ವನಿ ಯಾತ್ರೆ ಶಿವಮೊಗ್ಗದ ಪೇಪರ್ ಟೌನ್ ಭದ್ರಾವತಿ (Bhadravati) ತಲುಪಿದೆ. ಆದರೆ ಭದ್ರಾವತಿ ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದಾಲೇ ವೇದಿಕೆ ಮೇಲಿದ್ದ ಕಾರ್ಯಕರ್ತರ (party workers) ನಡುವೆ ಅದ್ಯಾವುದೋ ಕಾರಣಕ್ಕೆ ಗಲಾಟೆ ಶುರುವಾಯಿತು. ಗಲಾಟೆಗೆ ಕಾರಣವೇನು ಅನ್ನೋದು ಗೊತ್ತಾಗಿಲ್ಲ ಮಾರಾಯ್ರೇ. ಆದರೆ ಶಿವಕುಮಾರ್ ಸೇರಿದಂತೆ ವೇದಿಕೆ ಮೇಲಿದ್ದ ನಾಯಕರೆಲ್ಲ ಗಲಾಟೆ ಮಾಡುತ್ತಿದ್ದ ಕಾರ್ಯಕರ್ತರನ್ನು ಶಾಂತಗೊಳಿಸಲು ಪ್ರಯತ್ನಿಸಿದರೂ ಅದು ಸಫಲವಾಗಲಿಲ್ಲ. ಪೋಡಿಯಂ ಬಳಿ ಮೈಕ್ ಹಿಡಿದು ನಿಂತಿದ್ದ ಕಾರ್ಯಕರ್ತರಿಬ್ಬರು ಎಲ್ಲರೂ ನಮ್ಮ ಕಾರ್ಯಕರ್ತರೇ ಅಂತ ಅರಚುತ್ತಾ ಹೇಳಿದರೂ ತಲೆಮೇಲೆ ಗಾಂಧಿಟೋಪಿ ಧರಿಸಿದ್ದ ಕಾರ್ಯಕರ್ತರು ಸಮಾಧಾನಗೊಳ್ಳಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 08, 2023 06:21 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.