ವಿವಾದಿತ ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

Edited By:

Updated on: Nov 03, 2026 | 10:45 PM

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಛಲವಾದಿ ನಾರಾಯಣಸ್ವಾಮಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ಕೊಲೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ, ನಾರಾಯಣಸ್ವಾಮಿ ಬಂಧನಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರನ್ನು ಕೊಲೆ ಮಾಡಲು ಪ್ರಚೋದನೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಬೆಂಗಳೂರು, ನವೆಂಬರ್​​ 03: ‘ಕಾಂಗ್ರೆಸ್​​ನ್ನ ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ’ ಎಂದು ವಿವಾದಿತ ಹೇಳಿಕೆ ನೀಡಿರುವ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್​ನಲ್ಲಿರುವ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಛಲವಾದಿ ನಾರಾಯಣಸ್ವಾಮಿ ಮೇಲೆ ಕೊಲೆ ಪ್ರಚೋದನೆ ಕೇಸ್ ಹಾಕಬೇಕು. ಕೂಡಲೇ ಅವರನ್ನ ಬಂಧಿಸುವಂತೆ’ ಮನೋಹರ್ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 03, 2026 10:24 PM
Loading...
Unable to load recommendations.
Follow Us
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More