BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರ ಎಂಟ್ರಿ: ಫುಲ್ ಹೈಡ್ರಾಮಾ
ಬಾಗಲಕೋಟೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳ ಪರ ಪಕ್ಷದ ಕಾರ್ಯಕರ್ತರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಬಿಜೆಪಿಗರು ಹಮ್ಮಿಕೊಂಡಿದ್ದ ರೋಡ್ ಶೋಗೆ ಪಕ್ಷದ ಬಾವುಟ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಎಂಟ್ರಿ ಕೊಟ್ಟ ಪರಿಣಾಮ ಫುಲ್ ಹೈಡ್ರಾಮಾವೇ ನಡೆದಿದೆ. ಪೊಲೀಸರ ಮಧ್ಯಪ್ರವೇಶದಿಂದ ಅಂತಿಮವಾಗಿ ಪರಿಸ್ಥಿತಿ ತಿಳಿಗೊಂಡಿದೆ.
ಬಾಗಲಕೋಟೆ, ಮಾರ್ಚ್ 30: ಉಪಚುನಾವಣೆ ಹಿನ್ನೆಲೆ ಬಿಜೆಪಿ ರೋಡ್ ಶೋ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರು ಎಂಟ್ರಿಕೊಟ್ಟ ಪರಿಣಾಮ ಕಾರ್ಯಕರ್ತರ ಮಧ್ಯೆ ನೂಕಾಟ-ತಳ್ಳಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಮಧ್ಯೆ ಬೈಕ್ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಕಾರ್ಯಕರ್ತ ಯತ್ನಿಸಿದ್ದು, ಈ ವೇಳೆ ಗದ್ದಲ ಆರಂಭವಾಗಿದೆ. ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸರು ಎಳೆದು ತಂದಿದ್ದು, ಈ ವೇಳೆ ಅದೇ ಪಕ್ಷದ ಕಾರ್ಯಕರ್ತರು ಕಿರುಚಾಡಿದ್ದಾರೆ. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಅಂತಿಮವಾಗಿ ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸರು ಸ್ಥಳದಿಂದ ಕಳುಹಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

