BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರ ಎಂಟ್ರಿ: ಫುಲ್​​ ಹೈಡ್ರಾಮಾ

Edited By:

Updated on: Mar 30, 2026 | 7:37 PM

ಬಾಗಲಕೋಟೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳ ಪರ ಪಕ್ಷದ ಕಾರ್ಯಕರ್ತರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಬಿಜೆಪಿಗರು ಹಮ್ಮಿಕೊಂಡಿದ್ದ ರೋಡ್​​ ಶೋಗೆ ಪಕ್ಷದ ಬಾವುಟ ಹಿಡಿದು ಕಾಂಗ್ರೆಸ್​​ ಕಾರ್ಯಕರ್ತರು ಎಂಟ್ರಿ ಕೊಟ್ಟ ಪರಿಣಾಮ ಫುಲ್​​ ಹೈಡ್ರಾಮಾವೇ ನಡೆದಿದೆ. ಪೊಲೀಸರ ಮಧ್ಯಪ್ರವೇಶದಿಂದ ಅಂತಿಮವಾಗಿ ಪರಿಸ್ಥಿತಿ ತಿಳಿಗೊಂಡಿದೆ.

ಬಾಗಲಕೋಟೆ, ಮಾರ್ಚ್​​ 30: ಉಪಚುನಾವಣೆ ಹಿನ್ನೆಲೆ ಬಿಜೆಪಿ ರೋಡ್ ಶೋ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರು ಎಂಟ್ರಿಕೊಟ್ಟ ಪರಿಣಾಮ ಕಾರ್ಯಕರ್ತರ ಮಧ್ಯೆ ನೂಕಾಟ-ತಳ್ಳಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಮಧ್ಯೆ ಬೈಕ್ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಕಾರ್ಯಕರ್ತ ಯತ್ನಿಸಿದ್ದು, ಈ ವೇಳೆ ಗದ್ದಲ ಆರಂಭವಾಗಿದೆ. ಕಾಂಗ್ರೆಸ್​​ ಕಾರ್ಯಕರ್ತನನ್ನು ಪೊಲೀಸರು ಎಳೆದು ತಂದಿದ್ದು, ಈ ವೇಳೆ ಅದೇ ಪಕ್ಷದ ಕಾರ್ಯಕರ್ತರು ಕಿರುಚಾಡಿದ್ದಾರೆ. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಅಂತಿಮವಾಗಿ ಕಾಂಗ್ರೆಸ್​​ ಕಾರ್ಯಕರ್ತನನ್ನು ಪೊಲೀಸರು ಸ್ಥಳದಿಂದ ಕಳುಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More