AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಹುದ್ದೆ ರೇಸ್​ನಲ್ಲಿರುವ ಸತೀಶ್ ಜಾರಕಿಹೊಳಿಯನ್ನು ಇಂಪ್ರೆಸ್ ಮಾಡುವ ಕೆಲಸ ಶುರುವಾಗಿದೆ!

ಸಿಎಂ ಹುದ್ದೆ ರೇಸ್​ನಲ್ಲಿರುವ ಸತೀಶ್ ಜಾರಕಿಹೊಳಿಯನ್ನು ಇಂಪ್ರೆಸ್ ಮಾಡುವ ಕೆಲಸ ಶುರುವಾಗಿದೆ!

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 08, 2024 | 1:44 PM

Share

ಮುಡಾ ಹಗರಣದ ಆರೋಪದಲ್ಲಿ ಸಿಕ್ಕು ಒದ್ದಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಾನು ರಾಜೀನಾಮೆ ಸಲ್ಲಿಸುವ ಪ್ರಶ್ನೆಯೇ ಉದ್ಭವಿಸಲ್ಲ ಅಂತ ಹತ್ತಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೆ ರಾಜ್ಯದ ಕೆಲ ಪ್ರಭಾವಿ ನಾಯಕರು ಹೈಕಮಾಂಡನ್ನು ಭೇಟಿ ಮಾಡಿ ಇಂಪ್ರೆಸ್ ಮಾಡುವ ಕೆಲಸ ಮಾಡುತ್ತಿದ್ದಾರೆ.

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಅಂತಾದರೆ ಸ್ಥಾನಕ್ಕಾಗಿ ರೇಸ್​ನಲ್ಲಿರುವ ಪ್ರಮುಖರ ಪೈಕಿ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಒಬ್ಬರು. ಇಂದು ಮೈಸೂರಿಗೆ ತೆರಳಿದ್ದ ಸಚಿವ ಕಾರ್ಯಕರ್ತನೊಬ್ಬನ ಮನೆಯಲ್ಲಿ ದೋಸೆ ಮತ್ತು ಪೊಂಗಲ್ ಅನ್ನು ಉಪಹಾರವಾಗಿ ಸೇವಿಸಿದರು. ಅವರು ತಿಂಡಿ ತಿನ್ನುತ್ತಿದ್ದಾಗ ಸುತ್ತ ನೆರೆದಿದ್ದ ಕಾರ್ಯಕರ್ತರು ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮತ್ತೊಮ್ಮೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು; ಮುಖ್ಯಮಂತ್ರಿ ರೇಸ್​ನಲ್ಲಿ ಸತೀಶ್ ಜಾರಕಿಹೊಳಿ ಹೆಸರು!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More