ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಫೆಬ್ರುವರಿ 17, ಮಂಗಳೂರಲ್ಲಿ ನಡೆಯಲಿದೆ : ಡಿಕೆ ಶಿವಕುಮಾರ್

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಫೆಬ್ರುವರಿ 17, ಮಂಗಳೂರಲ್ಲಿ ನಡೆಯಲಿದೆ : ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 31, 2024 | 2:52 PM

ಮಾಗಡಿ ಶಾಸಕ ಹೆಚ್ ಎನ್ ಬಾಲಕೃಷ್ಣ ಗ್ಯಾರಂಟಿಗಳ ವಿಷಯದಲ್ಲಿ ಮಾತಾಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿ ಮುಗ್ಧ ಜನರನ್ನು ಕಾಂಗ್ರೆಸ್ ನಾಯಕರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಅಂತ ಹೇಳಿರುವುದನ್ನು ಅವರ ಗಮನಕ್ಕೆ ತಂದಾಗ, ಬಿಜೆಪಿ ನಾಯಕರ ಮಾತುಗಳಿಗೆ ತಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

ಚಿಕ್ಕಮಗಳೂರು: ಡಿಕೆ ಶಿವಕುಮಾರ್ (DK Shivakumar) ಕೆಲವು ಸಲ ಕರ್ನಾಟಕ ಪ್ರದೇಶ ಕಾಂಗ್ರೆಸ್ (KPCC) ಅಧ್ಯಕ್ಷನಾಗಿ ಮಾತಾಡುತ್ತಾರೆ ಮತ್ತು ಉಳಿದ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ. ಇವತ್ತು ಬೆಂಗಳೂರಲ್ಲಿ ಅವರು, ಪಕ್ಷದ ರಾಜ್ಯಾಧ್ಯಕ್ಷನಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಮಾಗಡಿ ಶಾಸಕ ಹೆಚ್ ಎನ್ ಬಾಲಕೃಷ್ಣ ಗ್ಯಾರಂಟಿಗಳ ವಿಷಯದಲ್ಲಿ ಮಾತಾಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪ್ರತಿಕ್ರಿಯೆ ನೀಡಿ ಮುಗ್ಧ ಜನರನ್ನು ಕಾಂಗ್ರೆಸ್ ನಾಯಕರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಅಂತ ಹೇಳಿರುವುದನ್ನು ಅವರ ಗಮನಕ್ಕೆ ತಂದಾಗ, ಬಿಜೆಪಿ ನಾಯಕರ ಮಾತುಗಳಿಗೆ ತಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು. ಮುಂದುವರಿದು ಮಾತಾಡಿದ ಶಿವಕುಮಾರ್, ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಕಾರ್ಯಕರ್ತರ ಬೃಹತ್ ಸಮಾವೇಶ ಕಾರಣಾಂತರಗಳಿಂದ ಮುಂದೂಡಲಾಗಿತ್ತು, ಅದರೆ ಅದನ್ನು ಫೆಬ್ರುವರಿ 17 ರಂದು ಮಂಗಳೂರಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ರಾಜ್ಯದ ಎಲ್ಲ ಮೂಲೆಗಳ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ