Karnataka Assembly Polls: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಗೆ ಕೆ ಹೆಚ್ ಮುನಿಯಪ್ಪ ಬೇಕಿಲ್ಲ, ಸ್ಥಳೀಯ ನಾಯಕನಿಗೆ ಟಿಕೆಟ್ ಬೇಕು

Updated on: Apr 01, 2023 | 10:48 AM

ಕ್ಷೇತ್ರದ ಬಹಳಷ್ಟು ಕಾರ್ಯಕರ್ತರಿಗೆ ಮುನಿಯಪ್ಪ ಸ್ಪರ್ಧಿಸುವುದು ಬೇಕಿಲ್ಲ. ಕಾಂಗ್ರೆಸ್ ವರಿಷ್ಠರು ಈ ಇಬ್ಬಂದಿಯನ್ನು ಹೇಗೆ ನಿಭಾಯಿಸುತ್ತಾರೋ ಕಾದು ನೋಡಬೇಕು.

ಬೆಂಗಳೂರು: ನಮಗೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ಕ್ಷೇತ್ರದಿಂದ ಸ್ಪರ್ಧಿಸುವುದು ಬೇಕು, ಕೆಹೆಚ್ ಮುನಿಯಪ್ಪ (KH Muniyappa) ಬೇಡ ಅಂತ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ (Devanahalli constituency) ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಕೆಪಿಸಿಸಿ (KPCC) ಮತ್ತು ಎಐಸಿಸಿ ನಾಯಕರಿಗೆ ಪೀಕಲಾಟಕ್ಕಿಟ್ಟುಕೊಂಡಿದೆ. ದೇವನಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿನ ಸಭೆ ಕೂಗಾಟ, ಅರಚಾಟಗಳಲ್ಲಿ ಪರ್ಯಾವಸಗೊಂಡಿತು. ಕ್ಷೇತ್ರದ ಬಹಳಷ್ಟು ಕಾರ್ಯಕರ್ತರಿಗೆ ಮುನಿಯಪ್ಪ ಸ್ಪರ್ಧಿಸುವುದು ಬೇಕಿಲ್ಲ. ಕಾಂಗ್ರೆಸ್ ವರಿಷ್ಠರು ಈ ಇಬ್ಬಂದಿಯನ್ನು ಹೇಗೆ ನಿಭಾಯಿಸುತ್ತಾರೋ ಕಾದು ನೋಡಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 01, 2023 10:48 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More