ರಾಹುಲ್ ಗಾಂಧಿಯನ್ನು ಪರಶುರಾಮನ ಅವತಾರದಲ್ಲಿ ಚಿತ್ರಿಸಿ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!

Updated on: Jun 19, 2026 | 7:36 PM

ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ 56ನೇ ಜನ್ಮದಿನದ ಅಂಗವಾಗಿ, ಉತ್ತರ ಪ್ರದೇಶದ ವಾರಾಣಸಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ. ರಾಹುಲ್ ಗಾಂಧಿ ಜನ್ಮದಿನದ ಪ್ರಯುಕ್ತ ಅವರನ್ನು 'ಪರಶುರಾಮ'ನ ಅವತಾರದಲ್ಲಿ ಬಿಂಬಿಸಿ ಗಂಗಾನದಿಯಲ್ಲಿ ಕ್ಷೀರಾಭಿಷೇಕ ಮಾಡಿದ್ದಾರೆ. ಈ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಒಂದು ಕೈಯಲ್ಲಿ ಕೊಡಲಿಯನ್ನು ಮತ್ತು ಇನ್ನೊಂದು ಕೈಯಲ್ಲಿ ಭಾರತದ ಸಂವಿಧಾನವನ್ನು ಹಿಡಿದಿರುವುದನ್ನು ಚಿತ್ರಿಸಲಾಗಿತ್ತು.

ನವದೆಹಲಿ, ಜೂನ್ 19: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 56ನೇ ಜನ್ಮದಿನದ ಪ್ರಯುಕ್ತ ವಾರಾಣಸಿಯ ಗಂಗಾ ನದಿಯ ಘಾಟ್‌ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪೋಸ್ಟರ್ ಒಂದನ್ನು ಪ್ರದರ್ಶಿಸಿದ್ದಾರೆ. ಈ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ (Rahul Gandhi) ಅವರನ್ನು ಭಗವಾನ್ ಪರಶುರಾಮನ ರೂಪದಲ್ಲಿ ಬಿಂಬಿಸಲಾಗಿದ್ದು, ಗಂಗಾನದಿಯ ನೀರಿನಲ್ಲಿ ನಿಂತು ಆ ಪೋಸ್ಟರ್‌ಗೆ ಕ್ಷೀರಾಭಿಷೇಕ ಮಾಡುವ ಮೂಲಕ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲಾಗಿದೆ. ಈ ಘಟನೆ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಾರಾಣಸಿಯಲ್ಲಿ ನಡೆದ ಈ ಆಚರಣೆಯಲ್ಲಿ ವೇದ ಮಂತ್ರಗಳನ್ನು ಪಠಿಸುತ್ತಾ, ಕಾಂಗ್ರೆಸ್ ಕಾರ್ಯಕರ್ತರು ಗಂಗಾನದಿಯಲ್ಲಿ ನಿಂತು ರಾಹುಲ್ ಗಾಂಧಿ ಅವರ ಭಾವಚಿತ್ರಕ್ಕೆ ಹಾಲನ್ನು ಸುರಿದು ಮಂತ್ರಘೋಷಗಳೊಂದಿಗೆ ಶುಭ ಹಾರೈಸಿದ್ದಾರೆ. ಈ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಒಂದು ಕೈಯಲ್ಲಿ ಕೊಡಲಿಯನ್ನು ಮತ್ತು ಇನ್ನೊಂದು ಕೈಯಲ್ಲಿ ಭಾರತದ ಸಂವಿಧಾನವನ್ನು ಹಿಡಿದಿರುವುದನ್ನು ಚಿತ್ರಿಸಲಾಗಿತ್ತು.

(Video Source: PTI)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More