ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ತಪ್ಪಿತಸ್ಥರನ್ನು ಬಂಧಿಸಲು ಆಗ್ರಹ

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ತಪ್ಪಿತಸ್ಥರನ್ನು ಬಂಧಿಸಲು ಆಗ್ರಹ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:May 03, 2022 | 9:31 PM

ಸರ್ಕಾರ ಭ್ರಷ್ಟರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಪಿ ಎಸ್ ಐ ನೇಮಕಾತಿ ಹಗರಣದಲ್ಲಿ ಸಚಿವ ಅಶ್ವಥ್ ನಾರಾಯಣ ಅವರ ಸಂಬಂಧಿಯೊಬ್ಬರು ಭಾಗಿಯಾಗಿರುವ ಬಗ್ಗೆ ಅರೋಪವಿದೆ. ಹಾಗಾಗಿ ಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು.

ಬೆಂಗಳೂರು: ತಾನು ನಡೆಸಿದ ಕಾಮಗಾರಿಗಳ ಬಿಲ್ ರಿಲೀಸ್ ಮಾಡಲು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪನವರ (KS Eshwarappa) ಕಡೆಯವರು ಶೇಕಡಾ 40 ರಷ್ಟು ಕಮೀಷನ್ ಕೇಳುತ್ತಿದ್ದಾರೆಂದು ಉಡುಪಿಯ ಒಂದು ಹೋಟೆಲ್ ನಲ್ಲಿ ಆತ್ಮಹತ್ಯೆಯ ಮೂಲಕ ಮರಣವನ್ನಪ್ಪಿದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ (Santosh Patil) ಆರೋಪದ ಹಿನ್ನೆಲೆಯಲ್ಲಿ ಸಚಿವರು ರಾಜೀನಾಮೆ ಸಲ್ಲಿಸಿದ ನಂತರ ರಾಜ್ಯದ ಬಿಜೆಪಿ (state BJP government) ಗರ ಬಡಿದಿರುವಂತಿದೆ. ಅವರ ರಾಜೀನಾಮೆ ಬಳಿಕ ಕುದುರಿಕೊಳ್ಳುವ ಮತ್ತು ಆಡಳಿತವನ್ನು ಸರಿಯಾಗಿ ನಡೆಸಿಕೊಂಡು ಹೋಗುವುದು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಪಿ ಎಸ್ ಐ ನೇಮಕಾತಿ ಹಗರಣ ಸರ್ಕಾರದ ವರ್ಚಸ್ಸಿಗೆ ದೊಡ್ಡ ಪೆಟ್ಟು ನೀಡಿದೆ ಅನ್ನೋದು ಸುಳ್ಳಲ್ಲ. ಅದರಲ್ಲೂ ಹಿರಿಯ ಸಚಿವ ಸಿ ಎನ್ ಅಶ್ವಥ ನಾರಾಯಣ ಅವರ ಸಂಬಂಧಿಯ ಹೆಸರು ಕೇಳಿಬರಲಾರಂಭಿಸಿದ ಬಳಿಕ ಕಾಂಗ್ರೆಸ್ ಸರ್ಕಾರದ ಮೇಲೆ ದಿನೇದಿನೆ ಒತ್ತಡ ಹೇರುತ್ತಿದೆ.

ಅದರ ಭಾಗವಾಗೇ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಕಾಂಗ್ರೆಸ್ ಭವನದ ಎದುರು ಮಂಗಳವಾರ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಸರ್ಕಾರ ಭ್ರಷ್ಟರನ್ನು ರಕ್ಷಿಸುವ ಕೆಲಸ ಮಾಡುಡಿತ್ತಿದೆ. ಪಿ ಎಸ್ ಐ ನೇಮಕಾತಿ ಹಗರಣದಲ್ಲಿ ಸಚಿವ ಅಶ್ವಥ್ ನಾರಾಯಣ ಅವರ ಸಂಬಂಧಿಯೊಬ್ಬರು ಭಾಗಿಯಾಗಿರುವ ಬಗ್ಗೆ ಅರೋಪವಿದೆ. ಹಾಗಾಗಿ ಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆಕಾರರು ಅಗ್ರಹಿಸಿದರು.

ಪಿ ಎಸ್ ಐ ನೇಮಕಾತಿ ಹಗರಣವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಸಿಟ್ಟಿಂಗ್ ನ್ಯಾಯಾಧೀಶರೊಬ್ಬರಿಂದ ತನಿಖೆ ನಡೆಸಬೇಕು. ತಪ್ಪಿತಸ್ಥರು ಅಮಾಯಕರಂತೆ ತಿರುಗಾಡುತ್ತಿದ್ದಾರೆ. ಅವರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು. ಅಮಿತ್ ಶಾ ಅವರು ಹಗರಣದ ಬಗ್ಗೆ ಏನೂ ಮಾತಾಡುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:   ಖಾಸಗಿಯವರಿಗೆ ನೀರು ಪೂರೈಕೆ ಖಂಡಿಸಿ ಧಾರವಾಡದಲ್ಲಿ ಜಲಮಂಡಳಿ ನೌಕರರಿಂದ ಧರಣಿ! ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

Published on: May 03, 2022 09:30 PM