ಡಿಕೆಶಿಗೆ ನಿಂದನೆ ಆರೋಪ: ‘ಕೈ’ ಕಾರ್ಯಕರ್ತರಿಂದ ಜನಾರ್ದನ ರೆಡ್ಡಿ ಮನೆಗೆ ಮುತ್ತಿಗೆ ಯತ್ನ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೇಸ್‌ಕೋರ್ಸ್ ರಸ್ತೆಯಲ್ಲಿರುವ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ. ಮನೋಹರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರೆಡ್ಡಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಜನವರಿ 18: ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಗಾಲಿ ಜನಾರ್ದನರೆಡ್ಡಿ ನಿಂದನೆ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಶಾಸಕರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ನಡೆದಿದೆ. ಮನೋಹರ್ ನೇತೃತ್ವದಲ್ಲಿ ಜನಾರ್ದನರೆಡ್ಡಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ದಿಢೀರ್ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ರಕ್ಷಣೆ ನೀಡಲಾಗಿಲ್ಲ ಅಂದ್ರೆ ಡಿಸಿಎಂ ಆಗಿ ಏನು ಕಿಸಿದಿದ್ದೀಯಾ? ಎಂದು ಬಳ್ಳಾರಿ ಸಮಾವೇಶದಲ್ಲಿ ಡಿಕೆಶಿ ಬಗ್ಗೆ ಜನಾರ್ದನರೆಡ್ಡಿ ಟೀಕೆ ಮಾಡಿದ್ದರು. ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಯತ್ನ ನಡೆಸಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 18, 2026 12:42 PM

