ಡಿಕೆಶಿಗೆ ನಿಂದನೆ ಆರೋಪ: ‘ಕೈ’ ಕಾರ್ಯಕರ್ತರಿಂದ ಜನಾರ್ದನ ರೆಡ್ಡಿ ಮನೆಗೆ ಮುತ್ತಿಗೆ ಯತ್ನ

Edited By:

Updated on: Jan 18, 2026 | 12:43 PM

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೇಸ್‌ಕೋರ್ಸ್ ರಸ್ತೆಯಲ್ಲಿರುವ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ. ಮನೋಹರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರೆಡ್ಡಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜನವರಿ 18: ಡಿಸಿಎಂ ಡಿ.ಕೆ.ಶಿವಕುಮಾರ್​​ಗೆ ಗಾಲಿ ಜನಾರ್ದನರೆಡ್ಡಿ ನಿಂದನೆ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ರೇಸ್​ಕೋರ್ಸ್​ ರಸ್ತೆಯಲ್ಲಿರುವ ಶಾಸಕರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ನಡೆದಿದೆ. ಮನೋಹರ್ ನೇತೃತ್ವದಲ್ಲಿ ಜನಾರ್ದನರೆಡ್ಡಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ದಿಢೀರ್ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ರಕ್ಷಣೆ ನೀಡಲಾಗಿಲ್ಲ ಅಂದ್ರೆ ಡಿಸಿಎಂ ಆಗಿ ಏನು ಕಿಸಿದಿದ್ದೀಯಾ? ಎಂದು ಬಳ್ಳಾರಿ ಸಮಾವೇಶದಲ್ಲಿ ಡಿಕೆಶಿ ಬಗ್ಗೆ ಜನಾರ್ದನರೆಡ್ಡಿ ಟೀಕೆ ಮಾಡಿದ್ದರು. ಇದನ್ನು ಖಂಡಿಸಿ ಕಾಂಗ್ರೆಸ್​​ ಕಾರ್ಯಕರ್ತರು ಮುತ್ತಿಗೆ ಯತ್ನ ನಡೆಸಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 18, 2026 12:42 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More