Rahul Gandhi case; ರಾಜ್ಯದೆಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ: ಡಿಕೆ ಶಿವಕುಮಾರ್   

|

Updated on: Jul 07, 2023 | 2:34 PM

ಶುಕ್ರವಾರ ಮಧ್ಯಾಹ್ನ 3.30 ಗಂಟೆಗೆ ಕಾಂಗ್ರೆಸ್ ಶಾಸಕರು ವಿಧಾನ ಸೌಧ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುವರು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಗರದಲ್ಲಿಂದು ಪತ್ರಿಕಾ ಗೋಷ್ಟಿಯೊಂದನ್ನಿ ನಡೆಸಿ, ಸೂರತ್ ನಗರದ ನ್ಯಾಯಾಲವೊಂದು ಮಾನಹಾನಿ ಪ್ರಕರಣವೊಂದರಲ್ಲಿ (defamation case) ವಿಧಿಸಿದ ಎರಡು ವರ್ಷ ಸೆರೆವಾಸ ತೀರ್ಪಿನ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು ಕಪ್ಪುದಿನ ಎಂದು ಹೇಳಿದ ಶಿವಕುಮಾರ್ ಭಾರತ್ ಜೋಡೋ ಯಾತ್ರೆಯ ಬಳಿಕ ರಾಹುಲ್ ಗಾಂಧಿಯವರ ಹೆಚ್ಚುತ್ತಿರುವ ಜನಪ್ರಿಯತೆ ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ, ಹಾಗಾಗೇ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದರು. ಶುಕ್ರವಾರ ಮಧ್ಯಾಹ್ನ 3.30 ಗಂಟೆಗೆ ಕಾಂಗ್ರೆಸ್ ಶಾಸಕರು ವಿಧಾನ ಸೌಧ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುವರು ಎಂದು ಉಪ ಮುಖ್ಯಮಂತ್ರಿ ಹೇಳಿದರು. ನಾಳೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ