ನಾನು ಭಾಷಣ ಮಾಡ್ಲಾ ಬೇಡ್ವಾ ಅಂತ ಸಿಎಂ ಸಿದ್ದರಾಮಯ್ಯ ಹೇಳಿದಾಗ ಫ್ರೀಡಂ ಪಾರ್ಕ್ನಲ್ಲಿ ನೀರವ ಮೌನ!
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಆಗಮಿಸಿದ್ದಾರೆ. ಸಿದ್ದರಾಮಯ್ಯ ಸಚಿವ ಸಂಪುಟದ ಎಲ್ಲ ಸಚಿವರು, ಮಾಜಿ ಸಚಿವರು ಮತ್ತು ಶಾಸಕರು ಮತ್ತು ಕಾರ್ಯಕರ್ತರು, ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಡಿಕೆ ಶಿವಕುಮಾರ್ ಸಿಲಿಂಡರ್ ಅನ್ನು ಎತ್ತಿ ಭುಜದ ಮೇಲೆ ಇಟ್ಟುಕೊಳ್ಳುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.
ಬೆಂಗಳೂರು, ಏಪ್ರಿಲ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ ಬಗ್ಗೆ ಎರಡು ಮಾತಿಲ್ಲ. ಅವರು ವೇದಿಕೆಗೆ ಬಂದಾಗೆಲ್ಲ ಜನ ಖುಷಿಯಿಂದ ಚಪ್ಪಾಳೆ ಹೊಡೆಯುತ್ತಾರೆ, ಶಿಳ್ಳೆ ಮತ್ತು ಕೇಕೆ ಹಾಕುತ್ತಾರೆ. ಅಡುಗೆ ಅನಿಲ ಸಿಲಿಂಡರ್ (LPG cylinder) ಬೆಲೆಯೇರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಇವತ್ತು ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಿದ್ದರಾಮಯ್ಯ ಕೊನೆಯದಾಗಿ ಭಾಷಣ ಮಾಡಲು ಬಂದಾಗ ಕಾರ್ಯಕರ್ತರು ಮತ್ತು ಅಭಿಮಾನಿಗಳು ಚಪ್ಪಾಳೆ ಮತ್ತು ಶಿಳ್ಳೆ ಹೊಡೆಯುವುದನ್ನು ನಿಲ್ಲಿಸಲಿಲ್ಲ. ಕೊನೆಗೆ ಸಿದ್ದರಾಮಯ್ಯನೇ ನಾನು ಭಾಷಣ ಮಾಡ್ಬೇಕಾಕ ಬೇಡ್ವಾ ಅಂತ ಗಟ್ಟಿಧ್ವನಿಯಲ್ಲಿ ಕೇಳಿದಾಗ ನೀರವ ಮೌನ!
ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ

ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
