ನಾನು ಭಾಷಣ ಮಾಡ್ಲಾ ಬೇಡ್ವಾ ಅಂತ ಸಿಎಂ ಸಿದ್ದರಾಮಯ್ಯ ಹೇಳಿದಾಗ ಫ್ರೀಡಂ ಪಾರ್ಕ್​ನಲ್ಲಿ ನೀರವ ಮೌನ!

ಅರುಣ್​ ಕುಮಾರ್​ ಬೆಳ್ಳಿ

Updated on: Apr 17, 2025 | 4:01 PM

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಆಗಮಿಸಿದ್ದಾರೆ. ಸಿದ್ದರಾಮಯ್ಯ ಸಚಿವ ಸಂಪುಟದ ಎಲ್ಲ ಸಚಿವರು, ಮಾಜಿ ಸಚಿವರು ಮತ್ತು ಶಾಸಕರು ಮತ್ತು ಕಾರ್ಯಕರ್ತರು, ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಡಿಕೆ ಶಿವಕುಮಾರ್ ಸಿಲಿಂಡರ್ ಅನ್ನು ಎತ್ತಿ ಭುಜದ ಮೇಲೆ ಇಟ್ಟುಕೊಳ್ಳುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.

ಬೆಂಗಳೂರು, ಏಪ್ರಿಲ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ ಬಗ್ಗೆ ಎರಡು ಮಾತಿಲ್ಲ. ಅವರು ವೇದಿಕೆಗೆ ಬಂದಾಗೆಲ್ಲ ಜನ ಖುಷಿಯಿಂದ ಚಪ್ಪಾಳೆ ಹೊಡೆಯುತ್ತಾರೆ, ಶಿಳ್ಳೆ ಮತ್ತು ಕೇಕೆ ಹಾಕುತ್ತಾರೆ. ಅಡುಗೆ ಅನಿಲ ಸಿಲಿಂಡರ್ (LPG cylinder) ಬೆಲೆಯೇರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಇವತ್ತು ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಿದ್ದರಾಮಯ್ಯ ಕೊನೆಯದಾಗಿ ಭಾಷಣ ಮಾಡಲು ಬಂದಾಗ ಕಾರ್ಯಕರ್ತರು ಮತ್ತು ಅಭಿಮಾನಿಗಳು ಚಪ್ಪಾಳೆ ಮತ್ತು ಶಿಳ್ಳೆ ಹೊಡೆಯುವುದನ್ನು ನಿಲ್ಲಿಸಲಿಲ್ಲ. ಕೊನೆಗೆ ಸಿದ್ದರಾಮಯ್ಯನೇ ನಾನು ಭಾಷಣ ಮಾಡ್ಬೇಕಾಕ ಬೇಡ್ವಾ ಅಂತ ಗಟ್ಟಿಧ್ವನಿಯಲ್ಲಿ ಕೇಳಿದಾಗ ನೀರವ ಮೌನ!

ಇದನ್ನೂ ಓದಿ:   ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್​ ವಿಭಾಗೀಯ ಪೀಠ ನೋಟಿಸ್​

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.