ಬಿಜೆಪಿ-ಜೆಡಿಎಸ್ ಮೈತ್ರಿ ಅಡ್ಡಪರಿಣಾಮ: ಎರಡೂ ಪಕ್ಷಗಳ ಹಲವು ಮುಖಂಡರು ಕಾಂಗ್ರೆಸ್ ತೆಕ್ಕೆಗೆ!

|

Updated on: Sep 27, 2023 | 2:53 PM

ಜೆಡಿಎಸ್ ಒಂದು ಜ್ಯಾತ್ಯಾತೀತ ಪಕ್ಷವೆಂದು ಗುರುತಿಸಿಕೊಂಡ ಕಾರಣ ಮುಸಲ್ಮಾನರ ಒಲವು ಗಳಿಸಿಕೊಂಡಿತ್ತು, ಆದರೆ ಬಿಜೆಪಿ ಜೊತೆ ಕೈ ಜೋಡಿಸಿದ್ದು ಭ್ರಮನಿರಸನ ಉಂಟು ಮಾಡಿದೆ ಎಂದು ಮುಸ್ಲಿಂ ಮುಖಂಡರು ಹೇಳುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಆಪ್ತರ ಮುಂದೆ ಅಸಮಾಧಾನ ತೋಡಿಕೊಳ್ಳುತ್ತಿದ್ದು ಮೈತ್ರಿ ವಿಚಾರದಲ್ಲಿ ತಮ್ಮನ್ನು ಕತ್ತಲೆಯಲ್ಲಿ ಇಡಲಾಗಿದೆ ಎಂದಿದ್ದಾರೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ನಡುವೆ ಏರ್ಪಡುತ್ತಿರುವ ಮೈತ್ರಿಯ ಅಡ್ಡಪರಿಣಾಮಗಳು ಶುರುವಾಗಿವೆ. ಯಶವಂತಪುರ ವಿಧಾನ ಸಭಾ (Yashwanthpur Assembly constituency) ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್-ಎರಡೂ ಪಕ್ಷಗಳ ನಾಯಕರು ಇಂದು ಕಾಂಗ್ರೆಸ್ ಪಕ್ಷ ಸೇರಿದರು. ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಇದಕ್ಕೂ ಮೊದಲು ಸಹ ಇದೇ ಕ್ಷೇತ್ರದ ಹಲವಾರು ಸ್ಥಳೀಯ ಬಿಜೆಪಿ ನಾಯಕರು ಮತ್ತು ಶಾಸಕ ಎಸ್ ಟಿ ಸೋಮಶೇಖರ್ (ST Somashekhar) ಬೆಂಬಲಿಗರು ಕಾಂಗ್ರೆಸ್ ಸೇರಿದ್ದರು. ಜೆಡಿಎಸ್ ಪಕ್ಷದ ಬಗ್ಗೆ ಹೇಳುವುದಾದರೆ, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮುಸ್ಲಿಂ ಮುಖಂಡರು ತೀವ್ರ ಅಸಮಧಾನಗೊಂಡಿದ್ದಾರೆ. ಜೆಡಿಎಸ್ ಒಂದು ಜ್ಯಾತ್ಯಾತೀತ ಪಕ್ಷವೆಂದು ಗುರುತಿಸಿಕೊಂಡ ಕಾರಣ ಮುಸಲ್ಮಾನರ ಒಲವು ಗಳಿಸಿಕೊಂಡಿತ್ತು, ಆದರೆ ಬಿಜೆಪಿ ಜೊತೆ ಕೈ ಜೋಡಿಸಿದ್ದು ಭ್ರಮನಿರಸನ ಉಂಟು ಮಾಡಿದೆ ಎಂದು ಅವರು ಹೇಳತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ತಮ್ಮ ಆಪ್ತರ ಮುಂದೆ ಅಸಮಾಧಾನ ತೋಡಿಕೊಳ್ಳುತ್ತಿದ್ದು ಮೈತ್ರಿ ವಿಚಾರದಲ್ಲಿ ತಮ್ಮನ್ನು ಕತ್ತಲೆಯಲ್ಲಿ ಇಡಲಾಗಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ