‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ಸಂಚು’; ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

Updated on: Oct 10, 2026 | 8:10 PM

ದೆಹಲಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. "ದೆಹಲಿಯಲ್ಲಿ ಅರಾಜಕತೆಯನ್ನು ಸೃಷ್ಟಿಸಲು ದೊಡ್ಡ ಮಟ್ಟದ ಸಂಚು ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. "ಸಿಜೆಪಿ ಅಥವಾ ಇತರೆ ಸಂಘಟನೆಗಳಿಗೆ ರಾಜಕೀಯ ಮಾಡಬೇಕೆಂದಿದ್ದರೆ, ಅವರು ಮೊದಲು ಒಂದು ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಬಹಿರಂಗವಾಗಿ ಘೋಷಿಸಲಿ. ಪ್ರಧಾನಮಂತ್ರಿ, ಗೃಹಮಂತ್ರಿ ಮತ್ತು ಚುನಾವಣಾ ಆಯೋಗವನ್ನು ಏಕವಚನದಲ್ಲಿ ನಿಂದಿಸುವುದು ಅಥವಾ ನಿಂದನೆಗಳನ್ನು ಮಾಡುವುದು ಪ್ರಜಾಪ್ರಭುತ್ವಕ್ಕೆ ಎಂದಿಗೂ ಒಳ್ಳೆಯದಲ್ಲ, ಹಾಗೂ ಇದು ನಮ್ಮ ಸಂಸ್ಕೃತಿಯೂ ಅಲ್ಲ," ಎಂದು ಜೋಶಿ ಕಿಡಿಕಾರಿದ್ದಾರೆ.

ನವದೆಹಲಿ, ಅಕ್ಟೋಬರ್ 10: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ, “ದೆಹಲಿಯಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಬೃಹತ್ ಸಂಚು ನಡೆಯುತ್ತಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿಗೆ (ಸಿಜೆಪಿ) ರಾಜಕೀಯ ಮಾಡುವ ಉದ್ದೇಶವಿದ್ದರೆ, ಅವರು ಅಧಿಕೃತವಾಗಿ ರಾಜಕೀಯ ಪಕ್ಷವನ್ನು ರಚಿಸುವುದಾಗಿ ಘೋಷಿಸಲಿ ಎಂದು ಸವಾಲು ಹಾಕಿದ್ದಾರೆ. “ಸಿಜೆಪಿ ಅಥವಾ ಇತರೆ ಸಂಘಟನೆಗಳಿಗೆ ರಾಜಕೀಯ ಮಾಡಬೇಕೆಂದಿದ್ದರೆ, ಅವರು ಮೊದಲು ಒಂದು ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಬಹಿರಂಗವಾಗಿ ಘೋಷಿಸಲಿ. ಪ್ರಧಾನಮಂತ್ರಿ, ಗೃಹಸಚಿವ ಮತ್ತು ಚುನಾವಣಾ ಆಯೋಗವನ್ನು ನಿಂದಿಸುವುದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ, ಹಾಗೂ ಇದು ನಮ್ಮ ಸಂಸ್ಕೃತಿಯೂ ಅಲ್ಲ” ಎಂದು ಅವರು ಕಿಡಿಕಾರಿದ್ದಾರೆ.

ಸಿಜೆಪಿ ಪ್ರತಿಭಟನೆಯನ್ನು ‘ಫ್ಲಾಪ್ ಶೋ’ ಎಂದ ಬಿಜೆಪಿ:

ಇದಕ್ಕೂ ಮುನ್ನ, ದೆಹಲಿ ಪ್ರತಿಭಟನೆಯು ಸಂಪೂರ್ಣವಾಗಿ “ಫ್ಲಾಪ್ ಶೋ” ಆಗಿದೆ ಎಂದು ಬಿಜೆಪಿ ಬಣ್ಣಿಸಿತ್ತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸಿ ಅರಾಜಕತೆಯನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ, ಅವರನ್ನು ‘ಮೀರ್ ಜಾಫರ್’ಗೆ ಹೋಲಿಸಿ ತೀವ್ರ ವಾಗ್ದಾಳಿ ನಡೆಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More