ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ  ಭಯಾನಕ ದೃಶ್ಯ ಇಲ್ಲಿದೆ

ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ ಇಲ್ಲಿದೆ

ರಮೇಶ್ ಬಿ. ಜವಳಗೇರಾ
|

Updated on: Dec 21, 2024 | 4:44 PM

ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನ ಜೊತೆಗೆ ಒಂದೇ ಕುಟುಂಬದ 6 ಮಂದಿ ಅಪ್ಪಷ್ಚಿಯಾಗಿದ್ದಾರೆ. ಬೆಂಗಳೂರಿನ ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಪಕ್ಕದ ರಸ್ತೆಯಿಂದ ಏಕಾಏಕಿ ಮೇಲೆರಗಿ ಬಂದ ಲಾರಿ ಚಂದ್ರಮ್ ಕುಟುಂಬ ಪ್ರಯಾಣಿಸ್ತಿದ್ದ ಕಾರಿನ ಮೇಲೆ ಬಿದ್ದಿತ್ತು. ಲಾರಿ ಬಿದ್ದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿತ್ತು. ಕಾರಿನಲ್ಲಿದ್ದ 6 ಜೀವಗಳು ಕ್ಷಣಮಾತ್ರದಲ್ಲಿ ಉಸಿರು ಚೆಲ್ಲಿವೆ.

ಬೆಂಗಳೂರು, (ಡಿಸೆಂಬರ್ 21): ವಿಧಿಯಾಟವೇ ಹಾಗೆ.. ಈಗಿದ್ದ ಜೀವ ಇನ್ನೊಂದು ಕ್ಷಣದಲ್ಲಿ ಇರುತ್ತೆ ಅಂತಾ ಹೇಳೋಕೆ ಆಗಲ್ಲ.. ಕೋಟಿ ಕೋಟಿ ದುಡ್ಡು ಇದ್ದರೂ ಕಾಲದ ಆಟಕ್ಕೆ ಸೋಲಲೇಬೇಕಾಗುತ್ತೆ.. ಇದೇ ರೀತಿಯ ಘಟನೆಯೊಂದು ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.. ಯಮಸ್ವರೂಪಿಯಾಗಿ ಬಂದ ಲಾರಿ ಹೆದ್ದಾರಿಯಲ್ಲಿ ಒಂದಿಡೀ ಕುಟುಂಬದ 6 ಜೀವಗಳನ್ನು ಬಲಿ ಪಡೆದಿದೆ. ಹೌದು….ಬೆಂಗಳೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರಿನ ಮೇಲೆ ತುಮಕೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಂಟೇನರ್​ ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಕಾರಿನಲ್ಲಿದ್ದ ಆರು ಜನರು ಅಲ್ಲೇ ಮೃತಪಟ್ಟಿದ್ದಾರೆ. ರನ್ನಿಂಗ್​ನಲ್ಲಿದ್ದ ಕಂಟೇನರ್ ಏಕಾಏಕಿ ಕಾರಿನ ಮೇಲೆ ಬೀಳುತ್ತಿರುವ ಭೀಕರ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.

ಇದನ್ನೂ ಓದಿ: ಬೆಂಗಳೂರು: ಏಕಾಏಕಿ ಕಾರಿನ ಮೇಲೆ ಲಾರಿ ಪಲ್ಟಿ: 6 ಜನ ಅಪ್ಪಚ್ಚಿ!