HD Kumaraswamy; ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧೆ, ಬಿಜೆಪಿ ಜೊತೆ ಹೊಂದಾಣಿಕೆ ಗಾಳಿಸುದ್ದಿಗಳು: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 12, 2023 | 2:34 PM

ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಾವು ಯಾವ ನಿರ್ಧಾರವನ್ನೂ ತೆಗೆದುಕೊಂಡಿಲ್ಲ, ಪಕ್ಷದ ಸಂಘಟನೆಯಲ್ಲಿ ಬ್ಯೂಸಿಯಾಗಿರುವುದಾಗಿ ಕುಮಾರಸ್ವಾಮಿ ಹೇಳಿದರು.

ರಾಮನಗರ: ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರ ಮುಂದಿನ ರಾಜಕೀಯ ನಡೆಗಳು (political moves) ಜನಕ್ಕೆ ಅರ್ಥವಾಗುತ್ತಿಲ್ಲ. ಮಾಧ್ಯಮ ಪ್ರತಿನಿಧಿಗಳು ಕೇಳುವ ಪ್ರಶ್ನೆಗಳಿಗೆ ಅವರು ಸ್ಪಷ್ಟ ಉತ್ತರ ನೀಡೋದಿಲ್ಲ. ಕುಮಾರಸ್ವಾಮಿ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ (Lok Sabha polls) ಅವರು ಸ್ಪರ್ಧಿಸಲಿದ್ದಾರೆಂಬ ವದಂತಿ ದಟ್ಟವಾಗಿದೆ ಮತ್ತು ಅವರ ಪಕ್ಷ ಬಿಜೆಪಿ ಜೊತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ಗಾಳಿಸುದ್ದಿ ಇದೆ. ರಾಮನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಕುಮಾರಸ್ವಾಮಿ, ಚುನಾವಣೆ ಹತ್ತಿರವಾಗುವಾಗ ಇಂಥ ವದಂತಿಗಳು ಹರಡೋದು ಸಹಜ. ಆದರೆ ವಸ್ತುಸ್ಥಿತಿ ಚುನಾವಣಾ ಪ್ರಕ್ರಿಯೆ ಶುರುವಾದ ಬಳಿಕ ಮಾತ್ರ ಗೊತ್ತಾಗುತ್ತದೆ ಎಂದು ಹೇಳಿ, ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಾವು ಯಾವ ನಿರ್ಧಾರವನ್ನೂ ತೆಗೆದುಕೊಂಡಿಲ್ಲ, ಪಕ್ಷದ ಸಂಘಟನೆಯಲ್ಲಿ ಬ್ಯೂಸಿಯಾಗಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.