AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸವಿಲ್ಲದೆ ಕರಾವಳಿ ಗುತ್ತಿಗೆದಾರರ ಕೈ ಖಾಲಿ: ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯ ಆರೋಪ

ಕೆಲಸವಿಲ್ಲದೆ ಕರಾವಳಿ ಗುತ್ತಿಗೆದಾರರ ಕೈ ಖಾಲಿ: ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯ ಆರೋಪ

ಅಶೋಕ್​ ಪೂಜಾರಿ
| Edited By: |

Updated on:Feb 13, 2026 | 11:52 AM

Share

ರಾಜ್ಯ ಸರ್ಕಾರ ಕರಾವಳಿ ಭಾಗದ ಗುತ್ತಿಗೆದಾರರನ್ನು ನಿರ್ಲಕ್ಷ್ಯಿಸಿರುವ ಆರೋಪ ಕೇಳಿಬಂದಿದೆ. ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯದ ಕಾರಣ ಕೆಲಸವಿಲ್ಲದೆ ಗುತ್ತಿಗೆದಾರರು ಕಂಗಾಲಾಗಿದ್ದಾರೆ. ಯಂತ್ರೋಪಕರಣಗಳು, ವಾಹನಗಳು ತುಕ್ಕು ಹಿಡಿಯುತ್ತಿವೆ. ಸಾವಿರಾರು ಕೋಟಿ ಬಿಲ್​​ ಪೆಂಡಿಂಗ್​​ ಇದ್ದರೂ ಯಾವೊಬ್ಬ ಜನಪ್ರತಿನಿಧಿಯೂ ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮಂಗಳೂರು, ಫೆಬ್ರವರಿ 13: ಕರಾವಳಿ ಭಾಗಕ್ಕೆ ರಾಜ್ಯ ಸರ್ಕಾರ ನಿರೀಕ್ಷೆಯಷ್ಟು ಅನುದಾನ ನೀಡುತ್ತಿಲ್ಲ. ಹೀಗಾಗಿ ಕೆಲಸವಿಲ್ಲದೆ ಗುತ್ತಿಗೆದಾರರು ಕಂಗಾಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಗುತ್ತಿಗೆದಾರ ವಸಂತ ನಾಯ್ಕ್​​ ಮಾತನಾಡಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆಯುತ್ತಿದ್ದ ಅರ್ಧ ಕಾಮಗಾರಿಗಳೂ ಈಗ ನಡೆಯುತ್ತಿಲ್ಲ. ಹೀಗಾಗಿ ನಮ್ಮಲ್ಲಿರುವ ವಾಹನಗಳು, ಯಂತ್ರೋಪಕರಣಗಳು ಎರಡು ವರ್ಷದಿಂದ ತುಕ್ಕು ಹಿಡಿಯುತ್ತಿವೆ.  ನಮ್ಮಲ್ಲಿ 1,600ಕ್ಕೂ ಹೆಚ್ಚು ಗುತ್ತಿಗೆದಾರರು ಇದ್ದು, ಜಿಲ್ಲೆಯ ಗುತ್ತಿಗೆದಾರರಿಗೆ ಈವರೆಗೆ 1,162 ಕೋಟಿ ರೂಪಾಯಿ ಬಿಲ್ ಪೆಂಡಿಂಗ್ ಇದೆ. ಸ್ಪೀಕರ್ ಆಗಿ ಉಳ್ಳಾಲದ ಶಾಸಕರೇ ಇದ್ದಾರೆ. ಮನಸ್ಸು ಮಾಡಿದ್ರೆ ಅವರು ಈ ಸಮಸ್ಯೆ ಬಗೆಹರಿಸಬಹುದು.ಆದರೆ ಯಾರೂ ಸಹ ಈ ಬಗ್ಗೆ ಮನಸ್ಸು ಮಾಡುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 13, 2026 11:49 AM

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More