AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ಕಿಡಿ ಹೊತ್ತಿಸಿದ ಅಡ್ಡಂಡ ಕಾರ್ಯಪ್ಪ ನಿರ್ದೇಶನದ ‘ಗಾಂಧಿ ಹತ್ಯೆಯ ಸತ್ಯ’ ನಾಟಕ

ವಿವಾದದ ಕಿಡಿ ಹೊತ್ತಿಸಿದ ಅಡ್ಡಂಡ ಕಾರ್ಯಪ್ಪ ನಿರ್ದೇಶನದ ‘ಗಾಂಧಿ ಹತ್ಯೆಯ ಸತ್ಯ’ ನಾಟಕ

ರಾಮ್​, ಮೈಸೂರು
| Edited By: |

Updated on:Oct 04, 2026 | 10:36 AM

Share

ಮೈಸೂರಿನಲ್ಲಿ ಗಾಂಧಿ ಜಯಂತಿ ಸಂದರ್ಭದಲ್ಲಿಯೇ ‘ಗಾಂಧಿ ಹತ್ಯೆಯ ಸತ್ಯ’ ನಾಟಕವು ವಿವಾದಕ್ಕೆ ಕಾರಣವಾಗಿದೆ. ಮೈಸೂರಿನ ಕಿರು ರಂಗಮಂದಿರದಲ್ಲಿ ರಂಗಭೂಮಿ ಟ್ರಸ್ಟ್ ಕೊಡಗು ವತಿಯಿಂದ ಆಯೋಜಿಸಿದ್ದ ಈ ನಾಟಕ ಪ್ರದರ್ಶನವನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ. ಆದರೆ ನಾಟಕದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾತ್ರ ತಮ್ಮ ಕೃತಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಮೈಸೂರು, ಅಕ್ಟೋಬರ್​​ 04: ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ರಚಿಸಿ ನಿರ್ದೇಶಿಸಿದ ‘ಗಾಂಧಿ ಹತ್ಯೆಯ ಸತ್ಯ’ ನಾಟಕವು ಮೈಸೂರಿನಲ್ಲಿ ವಿವಾದದ ಕಿಡಿ ಹೊತ್ತಿಸಿದೆ. ಮೈಸೂರಿನ ಕಿರು ರಂಗಮಂದಿರದಲ್ಲಿ ರಂಗಭೂಮಿ ಟ್ರಸ್ಟ್ ಕೊಡಗು ವತಿಯಿಂದ ಆಯೋಜಿಸಿದ್ದ ಈ ನಾಟಕ ಪ್ರದರ್ಶನವನ್ನು ನಿಲ್ಲಿಸುವಂತೆ ಆಗ್ರಹಿಸಿ, ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡ್ಡಂಡ ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕಿಡಿ ಕಾರಿದ್ದಾರೆ. ಆದರೆ, ನಾಟಕದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಕೃತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಯಾವುದೇ ವ್ಯಕ್ತಿಗತ ಅಭಿಪ್ರಾಯಗಳನ್ನೊಳಗೊಂಡಿಲ್ಲ, ಬದಲಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಸತ್ಯಗಳನ್ನು, ನಾಥೂರಾಮ್ ಗೋಡ್ಸೆಯ ನ್ಯಾಯಾಲಯದ ಹೇಳಿಕೆಗಳು ಹಾಗೂ ನಿವೃತ್ತ ನ್ಯಾಯಾಧೀಶರ ಪುಸ್ತಕಗಳ ಆಧಾರದ ಮೇಲೆ ರಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮೂರು ವರ್ಷಗಳ ಕಾಲ ಸಂಶೋಧನೆ ನಡೆಸಿ ಈ ನಾಟಕವನ್ನು ಸಿದ್ಧಪಡಿಸಿರುವುದಾಗಿ ತಿಳಿಸಿದ್ದು, ಪ್ರತಿಭಟನೆಗಳಿಗೆ ಜಗ್ಗದೆ ಕಾನೂನು ಹೋರಾಟಕ್ಕೂ ಸಿದ್ಧ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 04, 2026 10:35 AM

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More