AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್!

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್!

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 24, 2026 | 10:45 AM

Share

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಹಾಕಲಾದ 40 ಅಡಿ ಟಿಪ್ಪು ಸುಲ್ತಾನ್ ಕಟೌಟ್ ವಿಡಿಯೋಗೆ ಪಾಕಿಸ್ತಾನ ಮುಜಾಹಿದ್ ಸಂಬಂಧಿತ ದೇಶವಿರೋಧಿ ಹಾಡು ಬಳಸಿ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಮಾಡಲಾಗಿದೆ. 'ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್' ಖಾತೆಯ ಈ ಕೃತ್ಯಕ್ಕೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಗರ ಠಾಣೆ ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಚಿಕ್ಕಮಗಳೂರು, ಆಗಸ್ಟ್ 24: ಆಗಸ್ಟ್ 26 ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಬೃಹತ್ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ. ಆದರೆ, ಈ ಕಟೌಟ್‌ನ ವಿಡಿಯೋವನ್ನು ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಹಿನ್ನೆಲೆಯಲ್ಲಿ ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ದೇಶವಿರೋಧಿ ಹಾಡನ್ನು ಬಳಸಲಾಗಿದೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯದ ವಿರುದ್ಧ ಸ್ಥಳೀಯ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ಇನ್ಸ್ಟಾಗ್ರಾಮ್ ಪೇಜ್ ವಿರುದ್ಧ ಸೌಮೋಟೋ ಕೇಸ್!

ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಇನ್ಸ್ಟಾ ಪೇಜ್ ವಿರುದ್ಧ ನಗರ ಠಾಣೆಯ PSI ಧನರಾಜ್ ನೀಡಿದ ದೂರಿನಂತೆ ದೇಶವಿರೋಧಿ ಕೃತ್ಯ ಹಾಗೂ ಕೋಮು ಪ್ರಚೋದನೆ (BNS 196, 299) ಅಡಿಯಲ್ಲಿ ಸೌಮೋಟೋ ಎಫ್‌ಐಆರ್ ದಾಖಲಾಗಿದೆ. ಈ ವಿಡಿಯೋ ಶೇರ್ ಮಾಡಿದವರನ್ನೂ ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 24, 2026 10:14 AM

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More