ತುಮಕೂರಿನ ಅಂಗನವಾಡಿಯಲ್ಲಿ ಕುಕ್ಕರ್ ಸಿಡಿತ: ತಪ್ಪಿದ ಭಾರೀ ಅನಾಹುತ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 12, 2024 | 4:16 PM

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಯಡವನಹಳ್ಳಿ ಗ್ರಾಮದಲ್ಲಿ ಅಂಗನವಾಡಿಯಲ್ಲಿ ಅಡುಗೆ ಮಾಡುವಾಗ ಕುಕ್ಕರ್​ ಸಿಡಿತವಾಗಿದೆ. ಅದೃಷ್ಟವಶಾತ್ 14 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವಂತಹ ಘಟನೆ ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಂಡುಬಂದಿದೆ.

ತುಮಕೂರು, ಜುಲೈ 12: ಅಂಗನವಾಡಿಯಲ್ಲಿ (Anganwadi) ಕುಕ್ಕರ್ (Pressure Cookers)​ ಸಿಡಿತಗೊಂಡಿದ್ದು, ಅದೃಷ್ಟವಶಾತ್ 14 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಡುಗೆ ಮಾಡುವಾಗ ಘಟನೆ ಸಂಭವಿಸಿದ್ದು, ಅಜಾಗರೂಕತೆಯಿಂದ ಕುಕ್ಕರ್ ಸಿಡಿತ ಶಂಕೆ ವ್ಯಕ್ತವಾಗಿದೆ. ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.