Cooking Oil Price Hike: ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ದರ ಭಾರೀ ಏರಿಕೆ

Updated on: Mar 14, 2026 | 1:02 PM

ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಅಡುಗೆ ಎಣ್ಣೆ ಬೆಲೆ ಗ್ಯಾಸ್ ಸಿಲಿಂಡರ್‌ಗಳಂತೆ ಏರಿಕೆಯಾಗಿದೆ. ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಮಯದಲ್ಲಿ ಎಣ್ಣೆ ಸರಬರಾಜು ಕಡಿಮೆಯಾಗಿ, ಪ್ರತಿ ಲೀಟರ್‌ಗೆ 20 ರೂಪಾಯಿ ಹೆಚ್ಚಳವಾಗಿದೆ. ಬ್ರಾಂಡೆಡ್ ಎಣ್ಣೆಯ ಕೊರತೆ ಎದುರಾಗಿದ್ದು, ವ್ಯಾಪಾರಿಗಳು ಮತ್ತು ಗ್ರಾಹಕರಲ್ಲಿ ಆತಂಕ ಮನೆ ಮಾಡಿದೆ.

ಬೆಂಗಳೂರು (ಮಾ.14): ಇರಾನ್-ಇಸ್ರೇಲ್ ಯುದ್ಧದ ಭೀತಿಯು ಇದೀಗ ಗ್ಯಾಸ್ ಸಿಲಿಂಡರ್‌ಗಳ ನಂತರ ಅಡುಗೆ ಎಣ್ಣೆಯ ಮೇಲೂ ಪರಿಣಾಮ ಬೀರಿದೆ. ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಮುನ್ನವೇ ಅಡುಗೆ ಎಣ್ಣೆಯ ದರ ಏರಿಕೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಯುದ್ಧದ ಕಾರಣದಿಂದ ಅಡುಗೆ ಎಣ್ಣೆಯ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.

ಏಜೆಂಟ್‌ಗಳಿಗೆ ಕೇಳಿದರೆ, 100-200 ಬಾಕ್ಸ್‌ಗಳ ಬದಲು ಕೇವಲ 10 ಪ್ರತಿಶತದಷ್ಟು (ಸುಮಾರು 20 ಆಯಿಲ್ ಟ್ಯಾಂಕರ್‌ಗಳು) ಮಾತ್ರ ಪೂರೈಕೆಯಾಗುತ್ತಿದೆ. ಬೆಂಗಳೂರಿನ ಅಡುಗೆ ಎಣ್ಣೆ ಅಂಗಡಿ ಮಾಲೀಕರಾದ ಅಜಯ್ ಅವರು, ಬ್ರಾಂಡೆಡ್ ಎಣ್ಣೆಯ ಪೂರೈಕೆ ತೀವ್ರವಾಗಿ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. ಪ್ರತಿ ಲೀಟರ್ ಎಣ್ಣೆಗೆ 20 ರೂಪಾಯಿಗಳಷ್ಟು ಬೆಲೆ ಏರಿಕೆಯಾಗಿದೆ. ಸರಕು ಸಿಗದ ಕಾರಣ ವ್ಯಾಪಾರಕ್ಕೆ ಹಿನ್ನಡೆಯಾಗಿದ್ದು, ಗ್ರಾಹಕರು ಬ್ರಾಂಡೆಡ್ ಉತ್ಪನ್ನಗಳಿಗಾಗಿ ಒತ್ತಾಯಿಸುತ್ತಿದ್ದಾರೆ. ಸರಬರಾಜಿನ ಕೊರತೆಯಿಂದಾಗಿ ಹಬ್ಬದ ಸಿದ್ಧತೆಗಳಿಗೂ ತೊಂದರೆಯಾಗುವ ಸಾಧ್ಯತೆಯಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More