Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಹೊಂದಾಣಿಕೆ ಕೆಲಸದಿಂದ ಮತದಾರರ ವಿಶ್ವಾಸ ಗೆಲ್ಲುವಲ್ಲಿ ಸಫಲರಾಗಿದ್ದೇವೆ: ಕುಮಾರಸ್ವಾಮಿ

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಹೊಂದಾಣಿಕೆ ಕೆಲಸದಿಂದ ಮತದಾರರ ವಿಶ್ವಾಸ ಗೆಲ್ಲುವಲ್ಲಿ ಸಫಲರಾಗಿದ್ದೇವೆ: ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 09, 2024 | 5:13 PM

ಮತದಾರರಲ್ಲಿ ದೊಡ್ಡಮಟ್ಟದ ಬದಲಾವಣೆ ಬಂದಿದೆ, ನಿಖಿಲ್ ನನ್ನು ಗೆಲ್ಲಿಸಬೇಕೆಂಬ ಛಲ ಮೂಡಿದೆ ಅವರಲ್ಲಿ ಎಂದು ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು ಬಹಿರಂಗ ಪ್ರಚಾರ ಕೊನೆಯ ಹಂತದಲ್ಲಿದೆ. ನಿಖಿಲ್​ಗಾಗಿ ಹೆಚ್ ಡಿ ದೇವೇಗೌಡ ಕೂಡ ಪ್ರಚಾರ ಮಾಡುತ್ತಿದ್ದಾರೆ.

ರಾಮನಗರ: ಚನ್ನಪಟ್ಟಣದ ತೌಟಹಳ್ಳಿಯಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಹೊಂದಾಣಿಕೆಯಿಂದ ಕ್ಷೇತ್ರದಲ್ಲಿ ಅದ್ಭುತವಾದ ಪ್ರಚಾರ ಅಗಿದೆ, ಪ್ರಚಾರದ ಆರಂಭಿಕ ಹಂತದಲ್ಲಿ ಕಾಂಗ್ರೆಸ್ ನಡೆಸಿದ ಕುತಂತ್ರದಿಂದ ಕೊಂಚ ಸಮಸ್ಯೆಯಾಗಿದ್ದು ನಿಜ, ಆದರೆ ಕ್ರಮೇಣ ತಾವು ಜನರ ವಿಶ್ವಾಸ ಗೆಲ್ಲುವಲ್ಲಿ ಯಶ ಕಂಡಿದ್ದೇವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: