ಆಂಬುಲೆನ್ಸ್ ಚಾಲಕ, ಆಸ್ಪತ್ರೆ ಸಿಬ್ಬಂದಿ ಆಟಕ್ಕೆ ಕೊರೊನಾ ಸೋಂಕಿತ ಸಾವು
[lazy-load-videos-and-sticky-control id=”UpxIw-WYdoQ”] ಬೆಂಗಳೂರು: ಅಂಬುಲೆನ್ಸ್ ಚಾಲಕ ಹಾಗೂ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷದಿಂದಾಗಿ ಕೊರೊನಾ ಸೋಂಕಿತ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 40 ವರ್ಷದ ವ್ಯಕ್ತಿ, ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ, ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ವ್ಯಕ್ತಿ ಗಿರಿನಗರದ ನರ್ಸಿಂಗ್ ಹೋಂಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಸೋಂಕಿತರನ್ನು ಆರ್ ಆರ್ ಮೆಡಿಕಲ್ ಕಾಲೇಜಿಗೆ ದಾಖಲಾಗಲು ಸೂಚನೆ ನೀಡಿದ್ದಾರೆ. ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಲು ಹೊರಟಿದ್ದ […]
[lazy-load-videos-and-sticky-control id=”UpxIw-WYdoQ”]
ಬೆಂಗಳೂರು: ಅಂಬುಲೆನ್ಸ್ ಚಾಲಕ ಹಾಗೂ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷದಿಂದಾಗಿ ಕೊರೊನಾ ಸೋಂಕಿತ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
40 ವರ್ಷದ ವ್ಯಕ್ತಿ, ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ, ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ವ್ಯಕ್ತಿ ಗಿರಿನಗರದ ನರ್ಸಿಂಗ್ ಹೋಂಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಸೋಂಕಿತರನ್ನು ಆರ್ ಆರ್ ಮೆಡಿಕಲ್ ಕಾಲೇಜಿಗೆ ದಾಖಲಾಗಲು ಸೂಚನೆ ನೀಡಿದ್ದಾರೆ.
ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಲು ಹೊರಟಿದ್ದ ಕೊರೊನಾ ಸೋಂಕಿತನನ್ನು, ಆಂಬುಲೆನ್ಸ್ ಚಾಲಕ ಆರ್ ಆರ್ ಆಸ್ಪತ್ರೆಗೆ ಕರೆದುಕೊಂಡು ಹೊಗುವ ಬದಲು, ಹೊಸೂರು ರಸ್ತೆಯ ನ್ಯಾನೋ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ.
ಆದರೆ ನ್ಯಾನೋ ಆಸ್ಪತ್ರೆಯ ಸಿಬ್ಬಂದಿ ಕೊರೊನಾ ಸೋಂಕಿತ ವ್ಯಕ್ತಿ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸದ ದಾಖಲೆ ನೀಡಿಲ್ಲವೆಂದು ಒಂದು ಗಂಟೆ ಕಾಲ ಚಿಕಿತ್ಸೆ ನೀಡದೆ ನರಳುವಂತೆ ಮಾಡಿದ್ದಾರೆ.
ಇದರಿಂದ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಕೊರೊನಾ ಸೋಂಕಿತ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದು, ಸೋಂಕಿತರ ಸಾವಿಗೆ ಆಸ್ಪತ್ರೆ ಸಿಬ್ಬಂದಿ ಹಾಗೂ ಅಂಬುಲೆನ್ಸ್ ಚಾಲಕನ ನಿರ್ಲಕ್ಷವೇ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.
Published On - 11:23 am, Mon, 17 August 20